Saturday, April 19, 2025
Google search engine

Homeಅಪರಾಧವ್ಯಾನ್‌ಗೆ ಟ್ರಕ್ ಡಿಕ್ಕಿ: 9 ಮಂದಿ ಸಾವು

ವ್ಯಾನ್‌ಗೆ ಟ್ರಕ್ ಡಿಕ್ಕಿ: 9 ಮಂದಿ ಸಾವು

ರಾಜಸ್ಥಾನ : ಇಂದು ಭಾನುವಾರ ಮುಂಜಾನೆ ಜಲಾವರ್‌ನಲ್ಲಿ ವೇಗವಾಗಿ ಬಂದ ಟ್ರಕ್ ಮದುವೆಯ ಅತಿಥಿಗಳಿದ್ದ ವ್ಯಾನ್‌ಗೆ ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಧ್ಯಪ್ರದೇಶದ ಖಿಲ್ಚಿಪುರದಲ್ಲಿ ಮದುವೆ ಸಮಾರಂಭದಲ್ಲಿ ಭಾಗವಹಿಸಿ ೧೦ ಮಂದಿ ಹಿಂದಿರುಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೂವರು ಪುರುಷರು ಸ್ಥಳದಲ್ಲೇ ಮೃತಪಟ್ಟರೆ, ಆರು ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದು ಬಳಿಕ ಆತನನ್ನು ಬಂಧಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಜಲಾವರ್ ಪೊಲೀಸ್ ವರಿಷ್ಠಾಧಿಕಾರಿ ರಿಚಾ ತೋಮರ್, ಝಲಾವರ್ ಜಿಲ್ಲೆಯ ಅಕ್ಲೇರಾ ಬಳಿಯ ಪಂಚೋಲಾದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ೯ ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು.

ಮದುವೆ ಮೆರವಣಿಗೆ ಮುಗಿಸಿ ವಾಪಸಾಗುತ್ತಿದ್ದ ವ್ಯಾನ್‌ಗೆ ಟ್ರಕ್ ಡಿಕ್ಕಿ ಹೊಡೆದಿದೆ. ಆರೋಪಿಯನ್ನು ಬಂಧಿಸಲಾಗಿದೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular