ಶಿವಮೊಗ್ಗ: ಹುಬ್ಬಳ್ಳಿಯ ನೇಹಾ ಹಿರೇಮಠ ಅವರ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಶಿವಮೊಗ್ಗದ ತರೀಕೆರೆಗೆ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲು ತೆರಳಿದ್ದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ನೇಹಾ ಹತ್ಯೆ ಪ್ರಕರಣವನ್ನ ಸಿಐಡಿ ತನಿಖೆಗೆ ವಹಿಸುತ್ತೇವೆ. ಇದಕ್ಕಾಗಿ ವಿಶೇಷ ಕೋರ್ಟ್ ಅನ್ನು ರಚಿಸುತ್ತೇವೆ ಎಂದು ಹೇಳಿದ್ದಾರೆ.