ಶಿವಮೊಗ್ಗ: ಮೇ 7 ರಂದು ನಡೆಯಲಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಕಣದಲ್ಲಿ ಉಳಿಯುವ ಮೂಲಕ ಪಕ್ಷದ ವಿರುದ್ಧ ಬಂಡಾಯದ ಸಮರಕ್ಕೆ ಸನ್ನದ್ಧರಾಗಿದ್ದೇನೆಂಬ ಸಂದೇಶವನ್ನು ಮಾಜಿ ಸಿಎಂ ಯಡಿಯೂರಪ್ಪ ಕುಟುಂಬ ಮತ್ತು ಬಂದ ಬಿಜೆಪಿ ಹೈಕಮಾಂಡ್ ಗೆ ರವಾನಿಸಿದ್ದಾರೆ.
ನಾಮಪತ್ರ ಹಿಂತೆಗೆತಕ್ಕೆ ಇಂದು ಅಂತಿಮ ದಿನವಾಗಿದ್ದು ಈಶ್ವರಪ್ಪ ನಾಮಪತ್ರ ಹಿಂತೆದುಕೊಂಡಿಲ್ಲ.
ಇಂದು ಸಹ ಈಶ್ವರಪ್ಪನವರು ಯಡಿಯೂರಪ್ಪ ಕುಟುಂಬದ ವಿರುದ್ಧ ತಮ್ಮ ಪ್ರಚಾರ ಸಭೆಗಳಲ್ಲಿ ವಾಗ್ದಾಳಿ ನಡೆಸಿದ್ದಾರೆ.
2013 ರ ವಿಧಾನಸಭೆ ಚುನಾವಣೆಯಲ್ಲಿ ಯಡಿಯೂರಪ್ಪ ಕೆಜೆಪಿ ಕಟ್ಟಿ ಅದರಿಂದ ರುದ್ರೇಗೌಡರನ್ನು ಕಣಕ್ಕಿಳಿಸಿ ಈಶ್ವರಪ್ಪ ಸೋಲಿಗೆ ಕಾರಣರಾಗಿದ್ದರು.
ಈಗ ಈಶ್ವರಪ್ಪ ಬಿಜೆಪಿ ಅಧಿಕೃತ ಅಭ್ಯರ್ಥಿ ಹಾಗೂ ಯಡಿಯೂರಪ್ಪ ಪುತ್ರ ರಾಘವೇಂದ್ರರನ್ನು ಪರಾಭವಗೊಳಿಸಿ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದಾರೆ.