ರಾಮನಗರ: ಆಯುಷ್ ಇಲಾಖೆ ವತಿಯಿಂದ ಇಂದು ಏ. ೨೨ನಗರದ ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ಆರೋಗ್ಯಕರ ಆಯುಷ್ ಪಾನೀಯ ಪರಿಚಯ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಗ್ವಿಜಯ್ ಬೋಡ್ಕೆ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ಚುನಾವಣಾ ಅಧಿಕಾರಿಗಳು ಹಾಗೂ ಸಾರ್ವಜನಿಕರಿಗೆ ಚಿಂಚಾ ಪಾನೀಯ ವಿತರಣೆ ಹಾಗೂ ಪಾನೀಯವನ್ನು ತಯಾರಿಸುವ ವಿಧಾನವನ್ನು ತಿಳಿಸಲಾಯಿತು. ಕರಪತ್ರ ವಿತರಿಸಲಾಯಿತು ಹಾಗೂ ಕಾರ್ಯಕ್ರಮದಲ್ಲಿ ವಿವಿಧ ಆರೋಗ್ಯಕರ ಪಾನೀಯಗಳ ಮಾದರಿಗಳನ್ನು ಸಹ ವೀಕ್ಷಣೆಗೆ ಇಡಲಾಗಿತ್ತು.
ಜಿಲ್ಲಾ ಆಯುಷ್ ಅಧಿಕಾರಿ ಡಾ. ಎ.ಆರ್. ಪದ್ಮಜಾ, ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.