ಉತ್ತರ ಪ್ರದೇಶ : ಉತ್ತರ ಪ್ರದೇಶದ ಆಗ್ರಾದಲ್ಲಿ ಮದುವೆಯೊಂದರಲ್ಲಿ ಡಿಜೆ ಹಾಡಿನ ವಿಚಾರವಾಗಿ ಎರಡು ಕುಟುಂಬದ ನಡುವೆ ನಡೆದ ಗಲಾಟೆ ಮದುಮಗಳ ತಂದೆಯ ಸಾವಿನಲ್ಲಿ ಅಂತ್ಯವಾಗಿದೆ. ಮದುವೆ ಮನೆಯಲ್ಲಿ ಡಿಜೆ ಹಾಡನ್ನು ಹಾಕಲು ಮದುಮಗಳ ತಂದೆ ಕೇಳಿದ್ದಾರೆ. ಇದಕ್ಕೆ ಹುಡುಗನ ಮನೆಯವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಲ್ಲಿಂದ ಆರಂಭವಾದ ವಾಗ್ವಾದ ಕೊಲೆಯಲ್ಲಿ ಅಂತ್ಯವಾಗಿದೆ.
ಮದುವೆ ಮನೆಯಲ್ಲಿ ನಡೆದ ಜಗಳ ವಿಕೋಪಕ್ಕೆ ತಿರುಗಿ ವಧುವಿನ ತಂದೆಗೆ ಸಂಬಂಧಿಕರು ಥಳಿಸಿದ್ದಾರೆ. ಪರಿಣಾಮ ಅವರು ತೀವ್ರವಾಗಿ ಗಾಯಗೊಂಡು ಕುಸಿದುಬಿದ್ದಿದ್ದಾರೆ. ತಕ್ಷಣ ಆತನನ್ನು ಆಸ್ಪತ್ರೆಗೆ ರವಾನಿಸಲಾಯಿತಾದ್ರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಫತೇಹಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಏಳು ಜನರನ್ನು ಬಂಧಿಸಲಾಗಿದೆ.