Saturday, April 19, 2025
Google search engine

Homeರಾಜಕೀಯಬಿಜೆಪಿ ಎಂಎಲ್ ​ಸಿ ಕೆಪಿ ನಂಜುಂಡಿ ರಾಜೀನಾಮೆ: ನಾಳೆ ಕಾಂಗ್ರೆಸ್ ಸೇರ್ಪಡೆ

ಬಿಜೆಪಿ ಎಂಎಲ್ ​ಸಿ ಕೆಪಿ ನಂಜುಂಡಿ ರಾಜೀನಾಮೆ: ನಾಳೆ ಕಾಂಗ್ರೆಸ್ ಸೇರ್ಪಡೆ

ಹುಬ್ಬಳ್ಳಿ: ವಿಧಾನಪರಿಷತ್​ ಸದಸ್ಯ ಸ್ಥಾನಕ್ಕೆ ವಿಧಾನಪರಿಷತ್​ ಸದಸ್ಯ ಕೆಪಿ ನಂಜುಂಡಿ ರಾಜೀನಾಮೆ ನೀಡಿದ್ದು, ಬುಧವಾರ ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಹೇಳಿದ್ದಾರೆ.

ವಿಧಾನ ಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿಗೆ ಅವರ ಹುಬ್ಬಳ್ಳಿಯ ಮನೆಗೆ ತೆರಳಿ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ.

ನಂಜುಂಡಿ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬಣದಲ್ಲಿ ಗುರುತಿಸಿಕೊಂಡಿದ್ದರು.

ರಾಜೀನಾಮೆ ನೀಡಿದ ಬಳಿಕ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಾಳೆ ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್ ಪಕ್ಷಕ್ಕೆ​ ಸೇರುತ್ತಿದ್ದೇನೆ. ನಿರ್ಲಕ್ಷ್ಯಕ್ಕೊಳಗಾದ‌ ಕಾಯಕ ಸಮಾಜದ ಏಳಿಗೆಗೆ ರಾಜಕೀಯಕ್ಕೆ ಬಂದೆ. ಕಾಯಕ ಸಮಾಜ ಉಳಿಸಿಕೊಳ್ಳುತ್ತಾರೆ ಎನ್ನುವ ಕಾರಣಕ್ಕೆ ಬಿಜೆಪಿಗೆ ಬಂದೆ. ಆದರೆ, ಪಕ್ಷದ ಮುಖಂಡರು ಒಂದು ದಿನವೂ ಕಾಯಕ ಸಮಾಜದ ಬಗ್ಗೆ ಮಾತಾಡಿಲ್ಲ. ಬಿಜೆಪಿ ಸರ್ಕಾರವಿದ್ದಾಗ ನಮ್ಮ ಸಮುದಾಯಕ್ಕೆ ಯಾವುದೇ ರೀತಿ ಸ್ಪಂದಿಸಿಲ್ಲ. ನನ್ನನ್ನು ಎಂಎಲ್‌ ಸಿ ಮಾಡಿ ಸುಮ್ಮನಾದರು, ಏನೂ ಜವಾಬ್ದಾರಿ ಕೊಡಲಿಲ್ಲ ಎಂದು ಆರೋಪಿಸಿದರು.

ರಾಜೀನಾಮೆ ಕೊಡುವಂತೆ ಎರಡು ವರ್ಷದಿಂದ ನಮ್ಮ ಸಮಾಜದ ಒತ್ತಡವಿತ್ತು. ನನ್ನನ್ನು ನಿರ್ಲಕ್ಷ್ಯ ಮಾಡಿದ್ದಾರೆ, ನಮ್ಮ ಹೋರಾಟಕ್ಕೆ ಬೆಲೆ ಇಲ್ಲವಾಗಿದೆ. ಹೀಗಾಗಿ ನಾನು ಎಂಎಲ್‌ ಸಿ ಸ್ಥಾನಕ್ಕೆ ರಾಜಿನಾಮೆ ಕೊಟ್ಟಿದ್ದೇನೆ. ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ಕೊಡುತ್ತೇನೆ ಎಂದು ಅವರು ಹೇಳಿದರು.

ಬಸವರಾಜ್ ಹೊರಟ್ಟಿ ಅಸಮಾಧಾನ

ಕೆಪಿ ನಂಜುಂಡಿ ರಾಜೀನಾಮೆ ಕುರಿತು ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಪ್ರತಿಕ್ರಿಯಿಸಿದ್ದು, ರಾಜಿನಾಮೆ ಅಂಗೀಕರಿಸಿದ್ದೇನೆ. ಮರ್ಯಾದೆ ಇದ್ದವರು ರಾಜಕಾರಣದಲ್ಲಿ ಇರಬಾರದು ಅನ್ನೋ ಸ್ಥಿತಿ ನಿರ್ಮಾಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಜತೆಗೆ, ಪರಿಸ್ಥಿತಿ ಸುಧಾರಣೆಗೆ ಕ್ರಮ ಕೈಗೊಳ್ಳುತ್ತೇನೆ ಎಂದರು.

RELATED ARTICLES
- Advertisment -
Google search engine

Most Popular