Monday, April 21, 2025
Google search engine

Homeರಾಜ್ಯಸುದ್ದಿಜಾಲಬಸ್ ಪ್ರಯಾಣಿಕರಲ್ಲಿ ಮತದಾರರ ಜಾಗೃತಿ ಮೂಡಿಸಲು ಸ್ಟಿಕ್ಕರ್ ಅಳವಡಿಕೆಗೆ ಜಿಲ್ಲಾಧಿಕಾರಿ ಚಾಲನೆ

ಬಸ್ ಪ್ರಯಾಣಿಕರಲ್ಲಿ ಮತದಾರರ ಜಾಗೃತಿ ಮೂಡಿಸಲು ಸ್ಟಿಕ್ಕರ್ ಅಳವಡಿಕೆಗೆ ಜಿಲ್ಲಾಧಿಕಾರಿ ಚಾಲನೆ

ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕರ್ನಾಟಕ ರಾಜ್ಯ ಸಾರಿಗೆ ಸಂಪರ್ಕ ನಿಗಮ, ದಾವಣಗೆರೆ ಇವರ ಸಹಾಯದೊಂದಿಗೆ ಮಂಗಳವಾರ ಹೈಸ್ಕೂಲ್ ಮೈದಾನದಲ್ಲಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಬಸ್‍ಗಳಿಗೆ ಮತದಾನ ಜಾಗೃರತಿ ಸ್ಟಿಕ್ಕರ್ ಅಳವಡಿಸುವ ಮೂಲಕ ಮತದಾನ ಜಾಗೃತಿಗೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ವೆಂಕಟೇಶ್ ಎಂ.ವಿ. ಅವರು ಪ್ರಜಾಪ್ರಭುತ್ವ ನಮ್ಮಿಂದ, ಮತದಾನ ಹೆಮ್ಮೆಯಿಂದ, ಚುನಾವಣಾ ಪರ್ವ ದೇಶದ ಗರ್ವ ಎಂಬ ಶೀರ್ಷಿಕೆಯ ಸ್ಟಿಕ್ಕರ್‍ನ್ನು ಅನಾವರಣಗೊಳಿಸಿ ಮೇ 7 ರಂದು ಎಲ್ಲರೂ ತಪ್ಪದೇ ಮತಗಟ್ಟೆಗೆ ಬಂದು ಮತದಾನ ಮಾಡಿ ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಸುರೇಶ್ ಬಿ ಇಟ್ನಾಳ್, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಉಮಾ ಪ್ರಶಾಂತ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ, ಕೆ.ಎಸ್.ಆರ್.ಟಿ.ಸಿ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಸಿ.ಇ. ಶ್ರೀನಿವಾಸ್ ಮೂರ್ತಿ, ಕೆ.ಎಸ್.ಆರ್.ಟಿ.ಸಿ ವಿಭಾಗೀಯ ತಾಂತ್ರಿಕ ಅಭಿಯಂತರ ವೆಂಕಟೇಶ್, ಕೆ.ಎಸ್.ಆರ್.ಟಿ.ಸಿ.ವಿಭಾಗೀಯ ಸಂಚಲನಾಧಿಕಾರಿ ಫಕ್ರುದ್ದೀನ್, ಕೆ.ಎಸ್.ಆರ್.ಟಿ.ಸಿ ಆಡಳಿತಾಧಿಕಾರಿ ರಾಜಶೇಖರ್ ಕಂಬಾರ, ಕೆ.ಎಸ್.ಆರ್.ಟಿ.ಸಿ ಘಟಕದ ವ್ಯವಸ್ಥಾಪಕರು ಎಂ.ರಾಮಚಂದ್ರಪ್ಪ, ಕೆ.ಎಸ್.ಆರ್.ಟಿ.ಸಿ ಲೆಕ್ಕಾಧಿಕಾರಿ ಚೆಲುವೇಗೌಡ, ಕೆ.ಎಸ್.ಆರ್.ಟಿ.ಸಿ ನಗರ ಸಾರಿಗೆ ಘಟಕದ ವ್ಯವಸ್ಥಾಪಕ ಮರುಳುಸಿದ್ದಪ್ಪ, ಕೆ.ಎಸ್.ಆರ್.ಟಿ.ಸಿ ನಿಲ್ದಾಣಾಧಿಕಾರಿ ಸಿದ್ದೇಶ್, ಹಾಗೂ ಇನ್ನಿತರೆ ಸಿಬ್ಬಂದಿಗಳು ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular