Saturday, April 19, 2025
Google search engine

Homeರಾಜ್ಯಸುದ್ದಿಜಾಲಸ್ಟಾರ್‌ಚಂದ್ರು ಅವರನ್ನು ಅಧಿಕ ಮತಗಳಿಂದ ಗೆಲ್ಲಿಸಿ ಎಂದು ಶಾಸಕ ಡಿ.ರವಿಶಂಕರ್ ಮನವಿ

ಸ್ಟಾರ್‌ಚಂದ್ರು ಅವರನ್ನು ಅಧಿಕ ಮತಗಳಿಂದ ಗೆಲ್ಲಿಸಿ ಎಂದು ಶಾಸಕ ಡಿ.ರವಿಶಂಕರ್ ಮನವಿ


ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ : ತಾಲ್ಲೂಕಿನ ಜನರ ಸಮಸ್ಯೆಗಳಿಗೆ ಧ್ವನಿಯಾಗಲು ಲೋಕಸಭಾ ಚುನಾವಣೆಯಲ್ಲಿ ಮತದಾರರು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್‌ಚಂದ್ರು) ಅವರನ್ನು ಅಧಿಕ ಮತಗಳಿಂದ ಗೆಲ್ಲಿಸಿ ಸಂಸತ್ ಪ್ರವೇಶಕ್ಕೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಶಾಸಕ ಡಿ.ರವಿಶಂಕರ್ ಮನವಿ ಮಾಡಿದರು.

ಪಟ್ಟಣದ ಬಸವೇಶ್ವರ ಬಡಾವಣೆಯ ಬಸವೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಶ್ರೀ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಶಾಸಕರು ಪಟ್ಟಣದ ೨೩ ವಾರ್ಡ್ಗಳಲ್ಲಿ ಪಕ್ಷದ ಕಾರ್ಯಕರ್ತರು, ಪುರಸಭೆ ಸದಸ್ಯರೊಡಗೂಡಿ ಬಿರುಸಿನ ಪ್ರಚಾರ ನಡೆಸಿ ಮತಯಾಚನೆ ಮಾಡುತ್ತಿರುವುದಾಗಿ ತಿಳಿಸಿದರು.

ಕೆ.ಆರ್.ನಗರ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ೬೦ ಕೋಟಿಗೂ ಹೆಚ್ಚು ಅನುದಾನವನ್ನು ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ನೀಡಿದ್ದಾರೆ, ಅಮೃತ ಯೋಜನೆಯಡಿ ೩೦ ಕೋಟಿ ವೆಚ್ಚದಲ್ಲಿ ಶಾಶ್ವತವಾಗಿ ಕುಡಿಯುವ ನೀರಿನ ಒದಗಿಸುವ ಯೋಜನೆ, ೨೦ ಕೋಟಿ ವೆಚ್ಚದಲ್ಲಿ ಒಳ ಚರಂಡಿ ವ್ಯವಸ್ಥೆ, ೧೦ ಕೋಟಿ ವೆಚ್ಚದಲ್ಲಿ ವಿವಿಧ ಸಮಾಜದ ಸಮುದಾಯ ಭವನಗಳ ನಿರ್ಮಾಣ ಮಡಲಾಗುವುದು ಎಂದ ತಿಳಿಸಿದರು. ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಅವರನ್ನು ಹೆಚ್ಚಿನ ಮತಕೊಟ್ಟು ಗೆಲ್ಲಿಸಿದರೆ ನನಗೆ ಬೆನ್ನಲುಬಾಗಿ ನಿಂತು ಕೆ.ಆರ್.ನಗರ ವಿಧಾನಸಭಾ ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಜೊತೆಗೂಡಿ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

ಪಟ್ಟಣದ ಬಸವೇಶ್ವರ ಬಡಾವಣೆ, ಆಂಜನೇಯ ಬಡಾವಣೆ, ಶ್ರೀರಾಮ ಬ್ಲಾಕ್, ವೀನಾಕ್ಷಿ ಬಡಾವಣೆ, ಸೇರಿದಂತೆ ಪಟ್ಟಣದಲ್ಲಿ ಬಿರುಸಿನಿಂದ ಪ್ರಚಾರ ನಡೆಸಿ ಮತಯಾಚನೆ ಮಾಡಿದರು. ಜಿ.ಪಂ.ಮಾಜಿ ಸದಸ್ಯರಾದ ಮಾರ್ಚಹಳ್ಳಿ ಶಿವರಾಮ್, ಪುರಸಭಾ ಸದಸ್ಯರಾದ ಕೋಳಿ ಪ್ರಕಾಶ್, ಜಾವೀದ್ ಪಾಷ, ನಟರಾಜ್, ಸುಬ್ರಮಣ್ಯ, ಮಾಜಿ ಸದಸ್ಯ ಸೈಯದ್ ಅಸ್ಲಂ, ಯೂತ್ ಕಾಂಗ್ರೆಸ್ ಅಧ್ಯಕ್ಷ ಕೆಂಚಿಮಂಜು, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಗಡ್ಡಮಹೇಶ್, ತಾ.ಕುರುಬ ಸಂಘದ ಅಧ್ಯಕ್ಷ ಚೀರನಹಳ್ಳಿ ಶಿವಣ್ಣ, ಕಾಂಗ್ರೆಸ್ ಮುಖಂಡ ಜಯಂತ್, ಎಸ್.ಟಿ ಘಟಕದ ರಾಜ್ಯ ಉಪಾಧ್ಯಕ್ಷ ಕಲ್ಲಹಳ್ಳಿ ಶ್ರೀನಿವಾಸ್, ತಿಪ್ಪೂರು ಮಹದೇವನಾಯಕ, ಗೀತಾಮಹೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಸ್.ಮಹದೇವ್, ಉದಯ್ ಶಂಕರ್, ನಗರಧ್ಯಕ್ಷ ಎಂ.ಜೆ.ರಮೇಶ್, ತಾ.ಕಾಂಗ್ರೆಸ್ ವಕ್ತಾರ ಸೈಯದ್ ಜಾಬೀರ್, ಕಾರ್ಯಕರ್ತರಗಳಾದ ಸುಮಂತ, ಡೈರಿ ಭದ್ರೇಶ್, ಮಿಷನ್ ಚಂದ್ರು, ಬಲರಾಮ್, ಬೈರನಾಯಕ, ಪೆಟ್ರೋಲ್ ಮಂಜು, ಸೇರಿದಂತೆ ಇನ್ನಿತರರು ಹಾಜರಿದ್ದರು.

RELATED ARTICLES
- Advertisment -
Google search engine

Most Popular