Saturday, April 19, 2025
Google search engine

Homeಸ್ಥಳೀಯಸ್ವಯಂ ಬೆಳೆ ಸಮೀಕ್ಷೆಗೆ ರೈತರಿಗೆ ಸಲಹೆ

ಸ್ವಯಂ ಬೆಳೆ ಸಮೀಕ್ಷೆಗೆ ರೈತರಿಗೆ ಸಲಹೆ


ಪಿರಿಯಾಪಟ್ಟಣ: ಪ್ರಸಕ್ತ ೨೦೨೩-೨೪ರ ಮುಂಗಾರು ಹಂಗಾಮಿನ ಬೆಳೆ ವಿವರವನ್ನು ದಾಖಲಿಸಲು ಮೊಬೈಲ್ ಆಪ್ ಮೂಲಕ ರೈತರಿಂದಲೇ ಸ್ವಯಂ ಬೆಳೆ ಸಮೀಕ್ಷೆ ಕಾರ್ಯಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಡಾ.ವೈ.ಪ್ರಸಾದ್ ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಅವರು ಸರ್ಕಾರದ ಕೃಷಿ ಇಲಾಖಾ ವತಿಯಿಂದ ಬೆಳೆ ಸಮೀಕ್ಷೆಗಾಗಿಯೇ ಮೊಬೈಲ್ ಆ?ಯಪ್ ಬಿಡುಗಡೆಗೊಳಿಸಿದ್ದು, ಅದನ್ನು ಬಳಸಿಕೊಂಡು ಸ್ವತಂತ್ರವಾಗಿ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಗಳ ವಿವರಗಳನ್ನು ನಿಖರವಾಗಿ ದಾಖಲಿಸಬಹುದಾಗಿದೆ. ಅಲ್ಲದೆ ಸದರಿ ಬೆಳೆ ಸಮೀಕ್ಷೆ ಮಾಹಿತಿಯನ್ನು ಬೆಳೆ ವಿಮೆ, ಬೆಳೆನಷ್ಟ, ಪರಿಹಾರ, ಬೆಂಬಲ ಬೆಲೆ, ಕೃಷಿ ಸಾಲ ಸೌಲಭ್ಯ ಮತ್ತು ಸರ್ಕಾರದ ವಿವಿಧ ಯೋಜನೆಗಳನ್ನು ಪಡೆಯಲು ಪಾಣಿಯಲ್ಲಿ ವಿವರಗಳು ಅತ್ಯಗತ್ಯವಾಗಿದೆ
ಅಲ್ಲದೇ ಬೆಳೆ ಮಾನದಂಡಗಳಿಗೆ ಅನುಗುಣವಾಗಿ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆ ಅನುಷ್ಠಾನಕ್ಕಾಗಿ, ಆರ್.ಟಿ.ಸಿ.ಯಲ್ಲಿ ಬೆಳೆ ವಿವರ ದಾಖಲಾತಿಗಾಗಿ ಬಳಸಬಹುದಾಗಿದೆ. ಆದ್ದರಿಂದ ತಾಲೂಕಿನ ರೈತ ಬಾಂಧವರು ತಪ್ಪದೇ ಈ ಅವಕಾಶವನ್ನು ಬಳಸಿಕೊಂಡು ತಮ್ಮ ಜಮೀನಲ್ಲಿರುವ ಬೆಳೆಗಳ ವಿವರವನ್ನು ದಾಖಲಿಸಬೇಕು. ಗ್ರಾಮಗಳಲ್ಲಿರುವ ವಿದ್ಯಾವಂತ ಯುವಕರು ರೈತರ ಬೆಳೆ ಸಮೀಕ್ಷೆ ಆಪ್ ಡೌನ್‌ಲೋಡ್ ಮಾಡಿಕೊಂಡು ತಮ್ಮ ಹಳ್ಳಿಯ ರೈತ ಸಮುದಾಯದ ಬೆಳೆ ಮಾಹಿತಿ ದಾಖಲಿಸಬಹುದು. ಬೆಳೆ ವಿವರ ದಾಖಲಾಗದಿದ್ದಲ್ಲಿ ಸರ್ಕಾರದ ಯೋಜನೆಗಳಿಂದ ವಂಚಿತರಾಗುವ ಸಾಧ್ಯತೆ ಇರುತ್ತದೆ ಆದ್ದರಿಂದ
ರೈತ ಬಾಂಧವರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರ ದಾಖಲಿಸಲು ಮುಂಗಾರು ರೈತರ ಬೆಳೆ ಸಮೀಕ್ಷೆ ೨೦೨೩-೨೪ ಎಂಬ ಮೊಬೈಲ್ ಆಪ್ ಗೂಗಲ್ ಪ್ಲೇಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಂಡು
ಸಮೀಕ್ಷೆಯನ್ನು ಸ್ವಯಂ ರೈತರಿಂದಲೇ ಮಾಡಬೇಕಾಗಿದೆ ಈ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಲು ಗ್ರಾಮಗಳಲ್ಲಿ ಮಾಹಿತಿ ನೀಡಲಾಗುತ್ತಿದ್ದು ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ, ತೋಟಗಾರಿಕೆ, ರೇಷ್ಮೆ, ಕಂದಾಯ ಇಲಾಖೆ ಕಚೇರಿಗಳನ್ನು ಅಥವಾ ಆಯಾಯಾ ಗ್ರಾಮಗಳಿಗೆ ನಿಯೋಜಿಸಿರುವ ಖಾಸಗಿ ನಿವಾಸಿಗಳನ್ನು ಅಥವಾ ಬೆಳೆ ಸಮೀಕ್ಷೆ ಸಹಾಯವಾಣಿ ಸಂಖ್ಯೆ ೮೪೪೮೪೪೭೭೧೫ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular