Sunday, April 20, 2025
Google search engine

Homeಸಿನಿಮಾಇಂದು ಡಾ.ರಾಜ್‌ಕುಮಾರ್ ಜನ್ಮದಿನ: ಸ್ಮಾರಕಕ್ಕೆ ಕುಟುಂಬಸ್ಥರಿಂದ ಪೂಜೆ

ಇಂದು ಡಾ.ರಾಜ್‌ಕುಮಾರ್ ಜನ್ಮದಿನ: ಸ್ಮಾರಕಕ್ಕೆ ಕುಟುಂಬಸ್ಥರಿಂದ ಪೂಜೆ

ಬೆಂಗಳೂರು: ವರನಟ ಡಾ.ರಾಜ್‌ಕುಮಾರ್ ಅವರ ೯೫ನೇ ಹುಟ್ಟುಹಬ್ಬದಂದು ಕಂಠೀರವ ಸ್ಟುಡಿಯೋ ಭೇಟಿ ನೀಡಿ ಸ್ಮಾರಕಕ್ಕೆ ಕುಟುಂಬಸ್ಥರು ಪೂಜೆ ಸಲ್ಲಿಸಿದ್ದಾರೆ. ನೆಚ್ಚಿನ ನಟನ ಹುಟ್ಟುಹಬ್ಬಕ್ಕೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದಾರೆ.

ಕಂಠೀರವ ಸ್ಟುಡಿಯೋದಲ್ಲಿರುವ ಡಾ.ರಾಜ್‌ಕುಮಾರ್ ಸ್ಮಾರಕದ ಬಳಿ ರಾಘವೇಂದ್ರ ರಾಜ್‌ಕುಮಾರ್, ಪತ್ನಿ ಮಂಗಳ, ಡಾ.ರಾಜ್ ಪುತ್ರಿ ಲಕ್ಷ್ಮಿ ದಂಪತಿ, ಅಶ್ವಿನಿ ರಾಜ್‌ಕುಮಾರ್ ಪುತ್ರಿ ವಂದಿತಾ ಆಗಮಿಸಿದ್ದಾರೆ. ಡಾ.ರಾಜ್ ಸ್ಮಾರಕಕ್ಕೆ ಕುಟುಂಬಸ್ಥರಿಂದ ಪೂಜೆ ಸಲ್ಲಿಸಿದ್ದಾರೆ. ಅಂದಹಾಗೆ, ಈ ವೇಳೆ ಹೊನ್ನವಳ್ಳಿ ಕೃಷ್ಣ ಭಾಗಿಯಾಗಿ ಸ್ಮಾರಕಕ್ಕೆ ಪೂಜೆ ಸಲ್ಲಿಸಿದ್ದರು. ಡಾ.ರಾಜ್ ಕುಮಾರ್ ಅವರ ಹುಟ್ಟು ಹಬ್ಬ. ಇಂದಿನ ಅವರ ೯೫ನೇ ವರ್ಷದ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿಸಲು ನಾನಾ ರೀತಿಯ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದ್ದಾರೆ ಅವರ ಅಭಿಮಾನಿಗಳು. ಕರ್ನಾಟಕ ಸರಕಾರ ಮತ್ತು ಡಾ.ರಾಜ್ ಕುಮಾರ್ ಸ್ಮಾರಕ ಟ್ರಸ್ಟ್ ಪ್ರತಿ ವರ್ಷದಂತೆ ಈ ವರ್ಷವೂ ನಾನಾ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಇವುಗಳ ಜೊತೆಗೆ ರಾಜ್ಯಾದ್ಯಂತ ಡಾ.ರಾಜ್ ಅಭಿಮಾನಿಗಳು ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ಅನ್ನ ಸಂತರ್ಪನೆ, ರಕ್ತದಾನ ಶಿಬಿರಗಳನ್ನು ಏರ್ಪಡಿಸಿದ್ದಾರೆ. ಡಾ.ರಾಜ್ ಕುಮಾರ್ ಮತ್ತು ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಸಂಗೀತ ಸಂಜೆ ಕಾರ್ಯಕ್ರಮಗಳು ಅಲ್ಲಲ್ಲಿ ನಡೆಯಲಿವೆ.

RELATED ARTICLES
- Advertisment -
Google search engine

Most Popular