ಪಿರಿಯಾಪಟ್ಟಣ: ಅಹಿಂದ ವರ್ಗದ ಅಭಿವೃದ್ಧಿ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯವಾಗಿದ್ದು ಮತದಾರರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲ್ಲಿಸುವಂತೆ ಕುರುಬ ಸಮಾಜ ತಾಲೂಕು ಅಧ್ಯಕ್ಷ ಹೆಚ್.ಡಿ ಗಣೇಶ್ ಮನವಿ ಮಾಡಿದರು.
ಪಟ್ಟಣದ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು, ಸಮಾಜದಲ್ಲಿ ಹಿಂದುಳಿದ ವರ್ಗಗಳ ಬಗ್ಗೆ ಅಪಾರ ಕಾಳಜಿ ಹೊಂದಿರುವುದು ಕಾಂಗ್ರೆಸ್ ಪಕ್ಷ ಮಾತ್ರ ಈ ನಿಟ್ಟಿನಲ್ಲಿ ಸರ್ವರ ಏಳಿಗೆಗಾಗಿ ಹಾಗೂ ಶಾಂತಿಯುತ ಬಾಳ್ವೆಗಾಗಿ ಕಾಂಗ್ರೆಸ್ ಪಕ್ಷದ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರನ್ನು ಬೆಂಬಲಿಸಿ ಗೆಲ್ಲಿಸುವಂತೆ ಕೋರಿ ಸಂವಿಧಾನದ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಾ ಸಂವಿಧಾನ ಬದಲಾಯಿಸುತ್ತೇವೆ ಎನ್ನುತ್ತಿರುವ ಬಿಜೆಪಿ ಪಕ್ಷದ ಅಭ್ಯರ್ಥಿಗಳಿಗೆ ಮತದಾರರು ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುವಂತೆ ತಿಳಿಸಿದರು.
ಪುರಸಭಾ ಮಾಜಿ ಅಧ್ಯಕ್ಷ ಪಿ.ಎಸ್ ವಿಷಕಂಠಯ್ಯ ಅವರು ಮಾತನಾಡಿ ಬೆಲೆ ಏರಿಕೆ ಅಷ್ಟೇ ಬಿಜೆಪಿ ಸರ್ಕಾರದ ಸಾಧನೆಯಾಗಿದ್ದು ಸರ್ವರ ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸುವಂತೆ ಕೋರಿದರು.
ಆದಿ ಜಾಂಬವ ಸಂಘದ ಜಿಲ್ಲಾ ಉಪಾಧ್ಯಕ್ಷ ಸೀಗೂರು ವಿಜಯ್ ಕುಮಾರ್ ಅವರು ಮಾತನಾಡಿ ಸಂವಿಧಾನದ ಉಳಿವು ಹಾಗೂ ಜನಸಾಮಾನ್ಯರ ಕಷ್ಟ ಸುಖಗಳಿಗೆ ಸ್ಪಂದಿಸಲು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತರುವಂತೆ ಮನವಿ ಮಾಡಿದರು.
ಮುಖಂಡರಾದ ಪಿ.ಮಹದೇವ್ ಹಾಗು ಅಬ್ದುಲ್ ಅಜಿಜ್ ಮಾತನಾಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರನ್ನು ಗೆಲ್ಲಿಸುವಂತೆ ಕೋರಿದರು.
ಸುದ್ದಿಗೋಷ್ಠಿಯಲ್ಲಿ ಚಲವಾದಿ ಮಹಾಸಭಾ ಅಧ್ಯಕ್ಷ ಪಿ.ಪಿ ಮಹದೇವ್, ಮುಖಂಡರಾದ ಮುರುಳೀಧರ್, ಸುಂಡವಾಳು ಮಹಾದೇವ್, ಜವರೇಗೌಡ , ರಮೇಶ್ ಇದ್ದರು.