Sunday, April 20, 2025
Google search engine

Homeರಾಜ್ಯನಟಿ ಶ್ರುತಿಗೆ ಮಹಿಳಾ ಆಯೋಗದಿಂದ ನೋಟಿಸ್

ನಟಿ ಶ್ರುತಿಗೆ ಮಹಿಳಾ ಆಯೋಗದಿಂದ ನೋಟಿಸ್

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಕೊಟ್ಟಿರುವ ಗ್ಯಾರಂಟಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ನಟಿ ಶ್ರುತಿಗೆ ರಾಜ್ಯ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ. ಕಾಂಗ್ರೆಸ್ ಸರ್ಕಾರ ಕೊಟ್ಟಿರುವ ಗ್ಯಾರಂಟಿ ಯೋಜನೆಯಿಂದ ಹಾಗೂ ಫ್ರೀ ಬಸ್ ಯೋಜನೆಯಿಂದ ತೀರ್ಥಯಾತ್ರೆಗೆಂದು ಹೋಗುತ್ತೇವೆ ಎಂದು ಹೇಳಿ ಹೆಣ್ಣು ಮಕ್ಕಳು ಎಲ್ಲೆಲ್ಲೂ ಹೋಗುತ್ತಿರುತ್ತಾರೆ ಎಂದು ನಟಿ ಶ್ರುತಿ ಅವಹೇಳನಕಾರಿಯಾಗಿ ಮಾತನಾಡಿರೋದು ವರದಿಯಾಗಿದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಕಾರಣ ಕೇಳಿ ರಾಜ್ಯ ಮಹಿಳಾ ಆಯೋಗ ಅವರಿಗೆ ನೋಟಿಸ್ ಜಾರಿ ಮಾಡಿದೆ. ಶ್ರುತಿಗೆ ಕೊಟ್ಟಿ ನೋಟಿಸ್ ನಲ್ಲಿ ಈ ರೀತಿ ಬಹಿರಂಗವಾಗಿ ಹೆಣ್ಣು ಮಕ್ಕಳನ್ನು ಅವಮಾನಿಸಿರೋದು ಖಂಡನೀಯ. ರಾಜ್ಯ ಮಹಿಳಾ ಆಯೋಗದ ಅಧಿನಿಯಮ ೧೯೯೫ ಪರಿಚಯ ೧೦(ಎ)ಮೇರೆಗೆ ನೋಟಿಸ್ ಜಾರಿ ಮಾಡಿದೆ. ಏಳು ದಿನದಲ್ಲಿ ಸ್ಪಷ್ಟೀಕರಣ ನೀಡುವಂತೆ ಸೂಚನೆ ನೀಡಲಾಗಿದೆ.

RELATED ARTICLES
- Advertisment -
Google search engine

Most Popular