ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಗೆಲುವು ಖಚಿತವಾಗಿದ್ದು ಹೆಚ್ಚು ಮತಗಳ ಅಂತರದಿಂದ ಆಯ್ಕೆ ಮಾಡಬೇಕೆಂದು ಜಿಲ್ಲಾ ಕಾಂಗ್ರೆಸ್ ಗ್ಯಾರಂಟಿ ಸಮಿತಿಯ ಅಧ್ಯಕ್ಷ ಹಾಗೂ ಜಿ.ಪಂ. ಮಾಜಿ ಸದಸ್ಯ ಅರುಣ್‌ಕುಮಾರ್ ಮನವಿ ಮಾಡಿದರು.
ಚಾಮುಂಡೇಶ್ವರಿ ಕ್ಷೇತ್ರದ ಹಳೇಕಾಮನಕೊಪ್ಪಲಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಪರವಾಗಿ ಮನೆಮನೆಗೆ ತೆರಳಿ ಮತಯಾಚಿಸಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷ ಬಡವರ, ದೀನದಲಿತರ ಪಕ್ಷವಾಗಿದ್ದು ನುಡಿದಂತೆ ನಡೆದು ೫ ಗ್ಯಾರಂಟಿಗಳನ್ನು ಈಡೇರಿಸಿದೆ. ದೇಶದಲ್ಲಿಯೇ ಎಲ್ಲೂ ನೀಡಿರದಂತಹ ಸೌಲಭ್ಯಗಳನ್ನು ಸಿದ್ದರಾಮಯ್ಯರವರು ಬಡವರಿಗೆ ನೀಡಿದ್ದಾರೆ. ಆದ್ದರಿಂದ ಎಲ್ಲಾ ಜನರು ಇಂದು ಕಾಂಗ್ರೆಸ್ ಪರ ಒಲವು ತೋರುತ್ತಿರುವುದರಿಂದ ಎಂ. ಲಕ್ಷ್ಮಣ್ ಗೆದ್ದೇ ಗೆಲ್ಲುತ್ತಾರೆ ಎಂಬ ವಿಶ್ವಾಸವಿದೆ ಎಂದರು. ಈ ಸಂದರ್ಭದಲ್ಲಿ ಮುಖಂಡರಾದ ಕೆ.ಎಸ್. ಕರೀಗೌಡ, ಪಾಷ, ವೈ.ಸಿ. ಸ್ವಾಮಿ, ರಾಜೇಶ್, ಹಾಜರಿದ್ದರು.