ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆಯಾಗಿ ಒಂದು ವಾರದ ಬಳಿಕ ಕೊನೆಗೂ ಆಕೆ ಮನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದರು. ಇದೇ ವೇಳೆ ನೇಹಾ ತಂದೆ-ತಾಯಿಗೆ ಸಾಂತ್ವನ ಹೇಳಿದರು. ಹುಬ್ಬಳ್ಳಿಯಲ್ಲಿರುವ ನೇಹಾ ಮನೆಗೆ ಸಿಎಂ ಸಿದ್ದರಾಮಯ್ಯ ಗುರುವಾರ ಭೇಟಿ ಕೊಟ್ಟರು. ಮನೆಯಲ್ಲಿ ಹಾಕಲಾಗಿದ್ದ ನೇಹಾ ಭಾವಚಿತ್ರಕ್ಕೆ ಸಿಎಂ ಪುಷ್ಪ ನಮನ ಸಲ್ಲಿಸಿದರು. ನಂತರ ನೇಹಾ ತಂದೆ-ತಾಯಿಯಾದ ನಿರಂಜನ ಹಿರೇಮಠ ಹಾಗೂ ಗೀತಾ ಅವರಿಗೆ ಸಿಎಂ ಸಾಂತ್ವನ ಹೇಳಿದರು.