Saturday, April 19, 2025
Google search engine

Homeಅಪರಾಧಶಿರಸಿಯಲ್ಲಿ 4 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ, ಕೊಲೆಗೆ ಯತ್ನ: ಆರೋಪಿ ಬಂಧನ

ಶಿರಸಿಯಲ್ಲಿ 4 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ, ಕೊಲೆಗೆ ಯತ್ನ: ಆರೋಪಿ ಬಂಧನ

ಉತ್ತರ ಕನ್ನಡ: ಜಿಲ್ಲೆಯ ಶಿರಸಿಯಲ್ಲಿ ಮಗುವಿನ ಮೇಲೆ ಅತ್ಯಾಚಾರ ಎಸಗಿ ಕೊಲೆಗೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ.

ಆರೋಪಿಯನ್ನು ಆಂಧ್ರಪ್ರದೇಶದ ಕಡಪಾ ನಿವಾಸಿ ಶಿವ (26) ಎಂದು ಪೊಲೀಸರು ಗುರುತಿಸಿದ್ದಾರೆ.

ಜೂ.22 ರಂದು ಸಂಜೆ 5.30 ರ ಸುಮಾರಿಗೆ 4 ವರ್ಷದ ಮಗುವಿಗೆ ಅತ್ಯಾಚಾರವೆಸಗಿರುವುದಾಗಿ ತನಿಖಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆತ ಒಂದು ತಿಂಗಳು ಕಾಲ ಶಿರಸಿಯಲ್ಲಿ ದಿನಗೂಲಿ ಕೆಲಸ ಮಾಡುತ್ತಿದ್ದ. ಮದ್ಯದ ಅಮಲಿನಲ್ಲಿ ಆರೋಪಿ ಅಕ್ಕಪಕ್ಕದ ಮನೆಯ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಶಿರಸಿ ಹೊಸ ಮಾರ್ಕೆಟ್ ಠಾಣೆಯ ಪೊಲೀಸ್ ಸಬ್ ಇನ್ಸ್‌ ಪೆಕ್ಟರ್ ಭೀಮಾಶಂಕರ್ ತಿಳಿಸಿದ್ದಾರೆ.

ಇನ್ನು ಅತ್ಯಾಚಾರದ ನಂತರ ಆರೋಪಿ ವೈರ್ ಬಳಸಿ ಮಗುವನ್ನು ಕತ್ತು ಹಿಸುಕಲು ಪ್ರಯತ್ನಿಸಿದ್ದಾನೆ. ಈ ವೇಳೆ ಅಕ್ಕಪಕ್ಕದ ಮನೆಯವರು ಮಗುವಿನ ಅಳುವ ಶಬ್ದವನ್ನು ಕೇಳಿ ಹೊರ ಬಂದಿದ್ದು, ಆರೋಪಿ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಕೂಡಲೇ ಸ್ಥಳೀಯರ ನೆರವಿನೊಂದಿಗೆ ನಮ್ಮ ಸಿಬ್ಬಂದಿ ಹಿಡಿದಿದ್ದು, ಮಗು ಸುರಕ್ಷಿತವಾಗಿದ್ದು, ಜೀವಂತವಾಗಿದೆ ಎಂದು ಪಿಎಸ್‌ ಐ ತಿಳಿಸಿದ್ದಾರೆ.

ಈ ಕುರಿತು ಆರೋಪಿಗೆ ಪೋಕ್ಸೊ ಕಾಯಿದೆಯಡಿ, ಸೆಕ್ಷನ್ 376ಅತ್ಯಾಚಾರ, 307 ಕೊಲೆಗೆ ಯತ್ನ, ಸೆಕ್ಷನ್ 4 ಲೈಂಗಿಕ ದೌರ್ಜನ್ಯ ಮತ್ತು ಸೆಕ್ಷನ್ 6 ಉಗ್ರವಾದ ಲೈಂಗಿಕ ದೌರ್ಜನ್ಯ ಅಡಿಯಲ್ಲಿ ಶಿವ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪಿಎಸ್‌ ಐ ಭೀಮಾಶಂಕರ್‌ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular