Tuesday, April 22, 2025
Google search engine

Homeರಾಜ್ಯಈ ಬಾರಿ ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸ ನನಗಿದೆ: ಡಿ.ಕೆ ಸುರೇಶ್

ಈ ಬಾರಿ ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸ ನನಗಿದೆ: ಡಿ.ಕೆ ಸುರೇಶ್

ಬೆಂಗಳೂರು: ನಾನು ಕಳೆದ ಮೂರು ಚುನಾವಣೆಗಳಿಗಿಂತ ಈ ಬಾರಿ ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವ ಆತ್ಮವಿಶ್ವಾಸವಿದೆ. ಜನ ನನ್ನ ಪರವಾಗಿ ನಿಲ್ಲುವ ನಂಬಿಕೆಯಿದೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಹೇಳಿದರು.

ಸದಾಶಿವನಗರದ ನಿವಾಸದ ಬಳಿ ಇಂದು ಶುಕ್ರವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿ, ಶುಕ್ರವಾರ ಬೆಳಗಿನ ಜಾವದ ತನಕ ಕ್ಷೇತ್ರದ ಕಾರ್ಯಕರ್ತರು, ಮತದಾರರನ್ನು ಭೇಟಿಯಾಗಿ ಬಂದಿದ್ದೇನೆ. ಎಲ್ಲರೂ ಅತ್ಯಂತ ಹುಮ್ಮಸ್ಸಿನಿಂದ ಭಾಗವಹಿಸುತ್ತಿದ್ದಾರೆ. ಮತದಾನ ಮಾಡಲು ಯುವಕರ ಸಂಖ್ಯೆ ಕಡಿಮೆ ಇದೆ ಎಂದು ಕೇಳಿದಾಗ ಚುನಾವಣೆ ಪ್ರಜಾಪ್ರಭುತ್ವದ ಹಬ್ಬ. ಈ ಹಬ್ಬದಲ್ಲಿ ಹಿರಿಯರು, ಕಿರಿಯರು ಒಟ್ಟಾಗಿ ಭಾಗವಹಿಸಬೇಕು. ಮತದಾನ ಪ್ರಜಾಪ್ರಭುತ್ವದಲ್ಲಿ ಪ್ರಮುಖವಾದ ಪಾತ್ರವಹಿಸುತ್ತದೆ. ಈ ಹಕ್ಕನ್ನು ನಾವು ಚಲಾವಣೆ ಮಾಡಬೇಕಿರುವುದು ನಮ್ಮ ಕರ್ತವ್ಯ ಎಂದು ತಿಳಿಸಿದರು.

RELATED ARTICLES
- Advertisment -
Google search engine

Most Popular