Wednesday, April 23, 2025
Google search engine

Homeರಾಜ್ಯಸುದ್ದಿಜಾಲವಿಶಿಷ್ಟ ಸ್ವೀಪ್ ಕಪ್ ಮೂಲಕ ಮತದಾನ ಜಾಗೃತಿ: ಸ್ನೇಹಲ್ ಸುಧಾಕರ ಲೋಖಂಡೆ

ವಿಶಿಷ್ಟ ಸ್ವೀಪ್ ಕಪ್ ಮೂಲಕ ಮತದಾನ ಜಾಗೃತಿ: ಸ್ನೇಹಲ್ ಸುಧಾಕರ ಲೋಖಂಡೆ

ಶಿವಮೊಗ್ಗ : ‘ಸ್ವೀಪ್ ಕಪ್’ ವಿಭಿನ್ನ ಉಪಕ್ರಮವಾಗಿದ್ದು, ಜಿಲ್ಲೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸಲು ಹಲವಾರು ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ಎಲ್ಲಾ ಕ್ರೀಡಾಪಟುಗಳು ಭಾಗವಹಿಸಿ ಪಂದ್ಯಾವಳಿಯನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಪಂಚಾಯತ್ ಸಿಇಒ ಸ್ನೇಹಲ್ ಸುಧಾಕರ ಲೋಖಂಡೆ ಮಾಹಿತಿ ನೀಡಿದರು.

ಜಿಲ್ಲಾ ಸ್ವೀಪ್ ಸಮಿತಿಯಿಂದ ಎ. 27ರಂದು ನಗರದ ಎನ್‌ಇಎಸ್‌ ಮೈದಾನದಲ್ಲಿ ವಿವಿಧ ಇಲಾಖೆಗಳ ತಂಡಗಳಿಗೆ ಆಯೋಜಿಸಿದ್ದ ಟೆನಿಸ್‌ ಬಾಲ್‌ ಕ್ರಿಕೆಟ್‌ ಟೂರ್ನಿ- ‘ಸ್ವೀಪ್‌ ಕಪ್‌’ ಉದ್ಘಾಟಿಸಿ ಮಾತನಾಡಿದರು. ಮತದಾನ ಜಾಗೃತಿ ಮೂಡಿಸಲು ಜಿಲ್ಲೆಯಲ್ಲಿ ವಾಕಥಾನ್, ರ್ಯಾಲಿ, ವಿವಿಧ ಸಾಂಸ್ಕೃತಿಕ ಚಟುವಟಿಕೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಸ್ವೀಪ್ ಕಪ್ ಕ್ರೀಡಾ ಮನೋಭಾವದ ಮೂಲಕ ಜಾಗೃತಿ ಮೂಡಿಸುವ ವಿಭಿನ್ನ ಚಟುವಟಿಕೆಯಾಗಿದ್ದು, ಎಲ್ಲರೂ ಉತ್ಸಾಹದಿಂದ ಭಾಗವಹಿಸಿ ಪಂದ್ಯಾವಳಿಯನ್ನು ಯಶಸ್ವಿಗೊಳಿಸಬೇಕು. ಜಿಲ್ಲೆಯ ಎಲ್ಲ ಮತದಾರರು ಕಡ್ಡಾಯವಾಗಿ ಮತದಾನ ಮಾಡಬೇಕು. 100 ಮತಗಳನ್ನು ಹಾಕಬೇಕು ಎಂದರು.

ಜಿಲ್ಲಾ ಪೊಲೀಸ್ ಉಪ ಅಧಿಕಾರಿ ಮಿಥುನ್ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಮತದಾನ ಜಾಗೃತಿ ಕುರಿತು ಅತ್ಯಂತ ಕ್ರಿಯಾಶೀಲ ಚಟುವಟಿಕೆಗಳನ್ನು ಕೈಗೊಳ್ಳುತ್ತಿದ್ದು, ಅದರಲ್ಲಿ ಸ್ವೀಪ್ ಕಪ್ ಕೂಡ ಒಂದು. ಎಲ್ಲಾ ಸ್ಪರ್ಧಿಗಳು ಸ್ಪರ್ಧಾತ್ಮಕ ಮನೋಭಾವದಿಂದ ಪಂದ್ಯಾವಳಿಯಲ್ಲಿ ಭಾಗವಹಿಸಿ ಮತದಾನದ ಬಗ್ಗೆ ಜಾಗೃತಿ ಮೂಡಿಸಬೇಕು. ಎಲ್ಲ ಮತದಾರರು ಮತದಾನ ಮಾಡುವ ಮೂಲಕ ಜಿಲ್ಲೆಗೆ ಮಾದರಿಯಾಗಬೇಕು ಎಂದು ಹಾರೈಸಿದರು. ಪೌರಾಯುಕ್ತ ಮಾಯಣ್ಣಗೌಡ ಮಾತನಾಡಿ, ಮತದಾನ ಜಾಗೃತಿ ಕುರಿತು ಸ್ವೀಪ್ ವಿಶಿಷ್ಟ, ವಿವಿಧ ರೀತಿಯ ಚಟುವಟಿಕೆಗಳನ್ನು ಕೈಗೊಳ್ಳುತ್ತಿದ್ದು, ಎಲ್ಲ ಮತದಾರರು ಮೇ 7 ರಂದು ಮತದಾನ ಮಾಡುವ ಮೂಲಕ ತಮ್ಮ ಹಕ್ಕು ಚಲಾಯಿಸಬೇಕು. ಬಲಿಷ್ಠ ಪ್ರಜಾಪ್ರಭುತ್ವಕ್ಕಾಗಿ ನಾವೆಲ್ಲರೂ ಮತದಾನ ಮಾಡಬೇಕು. ಹೇಳಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆ ‘ಎ’ ವಿಭಾಗದಲ್ಲಿ ಆರೋಗ್ಯ ಇಲಾಖೆ ಮತ್ತು ಶಿಕ್ಷಣ ಇಲಾಖೆ ಹಾಗೂ ಕಂದಾಯ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಡುವೆ ಪಂದ್ಯಾವಳಿ ನಡೆಯಲಿದೆ.

ಪಂದ್ಯಾವಳಿಯು ಮಹಾನಗರ ಪಾಲಿಕೆ ಮತ್ತು ಅರಣ್ಯ ಇಲಾಖೆ, ಮಂಗಳೂರು ವಿದ್ಯುತ್ ನಿಗಮ ಮತ್ತು ಪೊಲೀಸ್ ಇಲಾಖೆ ಮತ್ತು ರಾಜ್ಯ ಲೆಕ್ಕಪತ್ರ ಇಲಾಖೆ ಮತ್ತು ಕೆಎಸ್‌ಆರ್‌ಪಿ ನಡುವೆ ‘ಬಿ’ ವಿಭಾಗದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ರಾಷ್ಟ್ರ ಮಟ್ಟದ ಕ್ರಿಕೆಟ್ ಆಟಗಾರ್ತಿ ಅದಿತಿ, ಕೆಎಸ್ ಆರ್ ಪಿ ಕಮಾಂಡೆಂಟ್ ಯುವಕುಮಾರ್, ಜಿ. ಪಂಚಾಯಿತಿ ಯೋಜನಾ ನಿರ್ದೇಶಕ ರಂಗಸ್ವಾಮಿ, ಜಿ.ಪಂ. ಸಿಪಿಒ ಗಾಯತ್ರಿ, ವರದಿಗಾರ ರಾಜು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ, ರಾಜ್ಯ ಮಟ್ಟದ ಸ್ವೀಪ್ ತರಬೇತುದಾರ ನವೀದ್ ಅಹಮದ್ ಪರ್ವೇಜ್, ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular