Saturday, April 19, 2025
Google search engine

Homeರಾಜಕೀಯಬರ ಪರಿಹಾರ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಬರ ಪರಿಹಾರ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಕೇಂದ್ರ ಸರ್ಕಾರ ಅಲ್ಪ ಪ್ರಮಾಣದಲ್ಲಿ ಬರ ಪರಿಹಾರ ನೀಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿ, ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಇಂದು ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಚೊಂಬು ಹಿಡಿದು ಪ್ರತಿಭಟನೆ ಕೈಗೊಂಡಿದ್ದಾರೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ರಣದೀಪ್ ಸಿಂಗ್ ಸುರ್ಜೇವಾಲ, ಸಚಿವರಾದ ಕೃಷ್ಣ ಬೈರೇಗೌಡ, ಡಾ.ಜಿ.ಪರಮೇಶ್ವರ್, ಕೆ.ಹೆಚ್.ಮುನಿಯಪ್ಪ, ರಾಮಲಿಂಗಾ ರೆಡ್ಡಿ, ದಿನೇಶ್ ಗುಂಡೂರಾವ್, ಎಂ.ಸಿ.ಸುಧಾಕರ್, ಚಲುವರಾಯಸ್ವಾಮಿ ಸೇರಿದಂತೆ ಕಾಂಗ್ರೆಸ್ ಶಾಸಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಈ ಸಂದರ್ಭದಲ್ಲಿ ಕೇಂದ್ರದ ವಿರುದ್ಧ ಪ್ಲಕಾರ್ಡ್‌ಗಳನ್ನು ಹಿಡಿದು ಕೈ ನಾಯಕರು ಆಕ್ರೋಶ ವ್ಯಕ್ತಪಡಿಸಿದರು. ಕೇಳಿದ್ದು ೧೮,೧೭೧ ಕೋಟಿ ರೂ. ನೀಡಿದ್ದು ೩,೪೫೪ ಕೋಟಿ ರೂ. ಕೂಡಲೇ ಪೂರ್ಣ ಬರ ಪರಿಹಾರವನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿ ಪ್ರಧಾನಿ ಮೋದಿ ವಿರುದ್ಧ ಧಿಕ್ಕಾರ ಕೂಗಿದರು. ಖಾಲಿ ಚೊಂಬು ಕೊಟ್ಟ ಪಾರ್ಟಿ ಬಿಜೆಪಿ, ಚೊಂಬೇಶ್ವರ ಮೋದಿವ ಗೋ ಬ್ಯಾಕ್ ಗೋ ಬ್ಯಾಕ್ ಮೋದಿ ಗೋ ಬ್ಯಾಕ್ ಎಂದು ಧಿಕ್ಕಾರ ಕೂಗಿದರು.

RELATED ARTICLES
- Advertisment -
Google search engine

Most Popular