Monday, April 21, 2025
Google search engine

Homeರಾಜ್ಯಸುದ್ದಿಜಾಲಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ : ಉಪ್ಪು ತಿಂದವನು ನೀರು ಕುಡಿಯಲೇಬೇಕು: ಎಚ್ ಡಿ ಕುಮಾರಸ್ವಾಮಿ

ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ : ಉಪ್ಪು ತಿಂದವನು ನೀರು ಕುಡಿಯಲೇಬೇಕು: ಎಚ್ ಡಿ ಕುಮಾರಸ್ವಾಮಿ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ಪ್ರಕರಣದ ತನಿಖೆಯನ್ನು ಎಸ್‌ಐಟಿಗೆ ವಹಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಈ ಬಗ್ಗೆ ಪ್ರಜ್ವಲ್ ರೇವಣ್ಣ ಅವರ ಚಿಕ್ಕಪ್ಪ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಮೊದಲ ಬಾರಿಗೆ ಮಾಧ್ಯಮಗಳ ಜೊತೆ ಮಾತನಾಡಿದ್ದು, ಉಪ್ಪು ತಿಂದವನು ನೀರು ಕುಡಿಯಲೇಬೇಕು ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಾನಾಗಲಿ ದೇವೇಗೌಡರಾಗಲಿ ಎಂದೂ ಸಹ ಹೆಣ್ಣು ಮಕ್ಕಳ ವಿಚಾರದಲ್ಲಿ ಅತ್ಯಂತ ಗೌರವಯುತವಾಗಿ ನಡೆದುಕೊಂಡಿದ್ದೇವೆ. ಯಾರಾದರೂ ಕಷ್ಟ ಹೇಳಿಕೊಂಡು ಬಂದರೆ ಅವರ ಕಷ್ಟ ಪರಿಹರಿಸಿ ಕಳುಹಿಸಿದ್ದೇವೆ. ನಾವಂತೂ ಮಹಿಳೆಯರಿಗೆ ಅತ್ಯಂತ ಹೆಚ್ಚಿನ ಗೌರವ ನೀಡಿದ್ದೇವೆ ಎಂದರು.

ಈ ಬಗ್ಗೆ ಎಸ್‌ಐಟಿ ತನಿಖೆಗೆ ಈಗಾಗಲೇ ಸರ್ಕಾರ ಆದೇಶ ಮಾಡಿದೆ. ಎಸ್‌ಐಟಿ ತನಿಖೆಯಿಂದ ವಾಸ್ತವಾಂಶ ಹೊರಗೆ ಬರಲಿ. ಈ ನೆಲದ ಕಾನೂನಿನಲ್ಲಿ ಯಾರೇ ತಪ್ಪು ಮಾಡಿದರು ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ನಾವಂತೂ ಯಾವುದಕ್ಕೂ ತಪ್ಪು ಮಾಡಿದ ವಿಷಯದಲ್ಲಿ ಯಾರಿಗೂ ಕ್ಷಮಿಸುವ ಪ್ರಶ್ನೆಯಿಲ್ಲ. ತನಿಖೆಯ ವರದಿ ಸಂಪೂರ್ಣ ಹೊರಗೆ ಬರಲಿ ಬಂದ ನಂತರ ಮಾತನಾಡುತ್ತೇನೆ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular