ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಇಂದು ಮಂಗಳೂರು ನಗರದ ಪತ್ರಿಕಾ ಭವನದಲ್ಲಿ ಪ್ರೆಸ್ ಕ್ಲಬ್ ಗೌರವ ಅತಿಥಿ ಪುರಸ್ಕಾರವನ್ನು ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಅಧ್ಯಕ್ಷ , ಪ್ರಸಿದ್ಧ ಭಾಗವತ ಪಟ್ಲ ಸತೀಶ್ ಶೆಟ್ಟಿ ಅವ್ರಿಗೆ ಪ್ರದಾನ ಮಾಡಲಾಯ್ತು.
ಹಿರಿಯ ಪತ್ರಕರ್ತ ಯು.ಕೆ.ಕುಮಾರನಾಥ್ ಕಾರ್ಯಕ್ರಮ ಉದ್ಘಾಟಿಸಿದರು. ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್. ಉಪಸ್ಥಿತರಿರುವರು ಎಂದು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.