ವಿಜಯಪುರ: ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದಿಂದ ಮೈತ್ರಿ ಪಕ್ಷ ಬಿಜೆಪಿಗೂ ಮುಜುಗರ ಆಗಿದೆ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಬೇಸರ ವ್ಯಕ್ತಪಡಿಸಿದರು. ಈ ಪ್ರಕರಣದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿರುವುದು ಸರಿಯಲ್ಲ. ಸರ್ಕಾರ ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ ರಚಿಸಿದೆ. ತನಿಖೆಯಿಂದ ಸತ್ಯ ಹೊರ ಬರಲಿದೆ, ಪ್ರಜ್ವಲ್ ರೇವಣ್ಣ ಅಷ್ಟೇ ಅಲ್ಲ. ತಪ್ಪು ಮಾಡಿದ ಯಾರಿಗೇ ಆಗಲಿ ಶಿಕ್ಷೆಯಾಗಲೇಬೇಕು ಎಂದು ಲಿಂಬಾವಳಿ ಒತ್ತಾಯಿಸಿದರು.
ರಾಜ್ಯ ಸರ್ಕಾರದ ಆಡಳಿತ ವಿರೋಧಿ ಅಲೆಯ ಕಾರಣದಿಂದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆ ಅನುಭವಿಸಲಿದೆ. ರಾಜ್ಯದಲ್ಲಿ ಲೋಕಸಭೆಗೆ ನಡೆದ ಮೊದಲ ಹಂತದ ಚುನಾವಣೆಯಲ್ಲಿ ಬಿಜೆಪಿ ೧೧ ಹಾಗೂ ಮೈತ್ರಿ ಪಕ್ಷವಾದ ಜೆಡಿಎಸ್ ೩ ಸ್ಥಾನಗಳಲ್ಲಿ ಮುಂಚೂಣಿಯಲ್ಲಿದೆ. ಎರಡನೇ ಹಂತದ ಕ್ಷೇತ್ರಗಳಲ್ಲೂ ಬಿಜೆಪಿ ಮುಂದಿದೆ. ಇದನ್ನು ಸಹಿಸಲಾಗದ ಕಾಂಗ್ರೆಸ್, ಅಭ್ಯರ್ಥಿ ಆಧಾರಿತ ಚುನಾವಣೆ ಪ್ರಚಾರ ಮಾಡದೆ ಅಶ್ಲೀಲ ವಿಡಿಯೋ ಪ್ರಕರಣವನ್ನು ರಾಜಕೀಕರಣ ಗೊಳಿಸುತ್ತಿದೆ ಎಂದು ದೂರಿದರು.