Monday, April 21, 2025
Google search engine

Homeಅಪರಾಧಅರೆಬೆಂದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ: ಕೊಲೆ ಶಂಕೆ

ಅರೆಬೆಂದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ: ಕೊಲೆ ಶಂಕೆ

ಹುಬ್ಬಳ್ಳಿ: ನಗರದ ಹೊರವಲಯದಲ್ಲಿ ಅರೆಬೆಂದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ದುಷ್ಕರ್ಮಿಗಳು ಕೊಲೆ ಮಾಡಿ ಸುಟ್ಟು ಹಾಕಿರುವ ಕುರಿತು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಇಲ್ಲಿನ ನೇಕಾರ ನಗರದ ಚೆಕ್ ಪೋಸ್ಟ್ ಸಮೀಪದ ಬ್ರಿಡ್ಜ್ ಹತ್ತಿರ ಅರ್ಧ ಸುಟ್ಟ ಸ್ಥಿತಿಯಲ್ಲಿ ಅಂದಾಜು 35- 40 ವಯಸ್ಸಿನ ವ್ಯಕ್ತಿ ಸಾವನ್ನಪ್ಪಿದ್ದಾನೆ. ಇಂದು ಬೆಳಿಗ್ಗೆ ದಾರಿಯಲ್ಲಿ ಸಂಚರಿಸುವ ಜನರು ಮೃತದೇಹವನ್ನು ನೋಡಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ಆಧರಿಸಿ ಸ್ಥಳಕ್ಕೆ ಹಳೇಹುಬ್ಬಳ್ಳಿ ಠಾಣೆಯ ಪೊಲೀಸರು ಆಗಮಿಸಿದ್ದಾರೆ. ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ. ಆದರೆ, ಈವರೆಗೆ ಮೃತನ ಮಾಹಿತಿ ದೊರೆತ್ತಿಲ್ಲ. ಸದ್ಯ ಮೃತನ ಕೈ ಮೇಲೆ ಶ್ರೇಯಸ್ ಎಂಬ ಹಚ್ಚೆ ಹಾಕಲಾಗಿದ್ದು, ದೇಹ ಸಂಪೂರ್ಣ ಅರ್ಧ ಸುಟ್ಟು ಹೋಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

RELATED ARTICLES
- Advertisment -
Google search engine

Most Popular