ಮಂಡ್ಯ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಹಿನ್ನಲೆ ಬಹಿರಂಗ ಸಭೆಯಲ್ಲಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತ ಸಿ ಟಿ ಮಂಜುನಾಥ್ ದೂರು ನೀಡಿದ್ದಾರೆ.
ಕೇಂದ್ರ ಚುನಾವಣಾ ಆಯೋಗ ಹಾಗೂ ಪೊಲೀಸ್ ಮಹಾನಿರ್ದೇಶಕರಿಗೆ ಡಿಸಿ ಮೂಲಕ ರಾಹುಲ್ ಗಾಂಧಿ ವಿರುದ್ಧ ದೂರು ನೀಡಿದ್ದಾರೆ.
ಈ ಕುರಿತು ಮಾತನಾಡಿದ ಸಿ ಟಿ ಮಂಜುನಾಥ್, ಪ್ರಜ್ವಲ್ ರೇವಣ್ಣ 400 ಮಹಿಳೆಯರನ್ನ ರೇಪ್ ಮಾಡಿದ್ದಾರೆ ಮೋದಿ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ ಈ ರೇಪಿಸ್ಟ್ ಗೆ ಮತ ಹಾಕಬೇಡಿ ಎಂದು ಬಹಿರಂಗ ಸಭೆಯಲ್ಲಿ ರಾಹುಲ್ ಗಾಂಧಿಯವರು ಹೇಳಿಕೆ ಕೊಟ್ಟಿದ್ದಾರೆ. ತಕ್ಷಣವೇ ರಾಹುಲ್ ಗಾಂಧಿಯವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಈಗಾಗಲೇ ಪ್ರಕರಣವನ್ನು ಎಸ್.ಐಟಿ ತನಿಖೆಗೆ ವಹಿಸಲಾಗಿದೆ. ಆದರೂ ಪ್ರಧಾನಿ ಮೋದಿ ಬಗ್ಗೆ ಈ ರೀತಿಯ ಹೇಳಿಕೆ ಕೊಡುವುದು ತಪ್ಪು ಎಂದು ಹೇಳಿದ್ದಾರೆ.

ವಿಡಿಯೋ ತನಿಖೆ ಬಳಿಕ ತಪ್ಪಿತಸ್ಥರು ಯಾರೆಂದು ಗೊತ್ತಾಗಲಿದೆ. ಹಿಂದೆ 2019 ರಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಗೆದ್ದು ಸಂಸದರಾಗಿದ್ದಾರೆ. ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಪ್ರಜ್ವಲ್ ರೇವಣ್ಣ ಅವರಿಗೆ ಮತ ಕೊಡಿ ಎಂದಿದ್ರು. ಇದಕ್ಕೆ ಸಿದ್ದರಾಮಯ್ಯ, ಕಾಂಗ್ರೆಸ್ ನವರೇ ಉತ್ತರ ಕೊಡಬೇಕು, ಬಿಜೆಪಿ ಯಾಕೆ ಉತ್ತರ ಕೊಡುತ್ತೆ. ಮಹಿಳೆಯರ ಮೇಲೆ ಸ್ವಲ್ಪ ನಾದ್ರು ಕಾಂಗ್ರೆಸ್ ನವರಿಗೆ ಗೌರವ ಇಲ್ಲ. ಪ್ರಧಾನಿ ಅವರಿಗೆ ಗೌರವ ಕೊಡುವ ಸೌಜನ್ಯ ಕೂಡ ಇಲ್ಲ. ತಕ್ಷಣವೇ ರಾಹುಲ್ ಗಾಂಧಿಯವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.