Tuesday, April 22, 2025
Google search engine

Homeಅಪರಾಧರೇವಣ್ಣಗೆ ಬಂಧನದಿಂದ ರಕ್ಷಣೆ ಒದಗಿಸಿದರೆ ಇಂದೇ ಎಸ್‌ಐಟಿ ಮುಂದೆ ಹಾಜರು: ನ್ಯಾಯಾಲಯಕ್ಕೆ ವಕೀಲರಿಂದ ಮಾಹಿತಿ

ರೇವಣ್ಣಗೆ ಬಂಧನದಿಂದ ರಕ್ಷಣೆ ಒದಗಿಸಿದರೆ ಇಂದೇ ಎಸ್‌ಐಟಿ ಮುಂದೆ ಹಾಜರು: ನ್ಯಾಯಾಲಯಕ್ಕೆ ವಕೀಲರಿಂದ ಮಾಹಿತಿ

ಮಹಿಳೆಯ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಹೊಂದಿಕೊಂಡ ಕ್ರಿಮಿನಲ್ ಪ್ರಕರಣದಲ್ಲಿ ಸಂತ್ರಸ್ತೆಯೊಬ್ಬರ ಅಪಹರಣದ ಪ್ರತ್ಯೇಕ ಎಫ್ಐಆರ್ ಗೆ ಸಂಬಂಧಿಸಿದಂತೆ ಹೊಳೆನರಸೀಪುರ ಶಾಸಕ‌ ಎಚ್ ಡಿ ರೇವಣ್ಣ ಅವರನ್ನು ಬಂಧಿಸದಂತೆ ರಕ್ಷಣೆ ನೀಡಿದರೆ ಇಂದೇ ಎಸ್ಐಟಿ ಮುಂದೆ ಹಾಜರಾಗುತ್ತಾರೆ ಎಂದು ಅವರ ಪರ ವಕೀಲರು ನ್ಯಾಯಾಲಯಕ್ಕೆ ಭರವಸೆ ನೀಡಿದರು.

ನಿರೀಕ್ಷಣಾ ಜಾಮೀನು ಕೋರಿ ರೇವಣ್ಣ ಸಲ್ಲಿಸಿರುವ ಅರ್ಜಿಯನ್ನು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ವಿಚಾರಣೆ ನಡೆಸಿದರು.

ವಿಚಾರಣೆ ವೇಳೆ ರೇವಣ್ಣ ಪರ ಹಿರಿಯ ವಕೀಲ ಮೂರ್ತಿ ಡಿ. ನಾಯಕ್ ಅವರು, “ಅರ್ಜಿದಾರ ರೇವಣ್ಣ ಅವರಿಗೆ ಜಾಮೀನು ನೀಡಿದರೆ ಇಂದೇ ಎಸ್ಐಟಿ ಮುಂದೆ ಹಾಜರಾಗುತ್ತಾರೆ” ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ವಿಶೇಷ ಸರ್ಕಾರಿ ಅಭಿಯೋಜಕ ಬಿ ಎನ್‌ ಜಗದೀಶ್ ಆಕ್ಷೇಪಣೆ ಸಲ್ಲಿಸಲು ಕಾಲಾವಾಕಾಶ ನೀಡುವಂತೆ ನ್ಯಾಯಾಧೀಶರಿಗೆ ಮನವಿ ಮಾಡಿದರು.

ಇಂದೇ ಆಕ್ಷೇಪಣೆ ಸಲ್ಲಿಸಿ ಎಂದು ಸೂಚಿಸಿದ ನ್ಯಾಯಾಧೀಶರು, ವಿಚಾರಣೆಯನ್ನು ಮಧ್ಯಾಹ್ನಕ್ಕೆ ಮುಂದೂಡಿದ್ದಾರೆ.

ಅರ್ಜಿದಾರ ರೇವಣ್ಣ ಪರ ಹೈಕೋರ್ಟ್ ವಕೀಲ ಪವನ್ ಸಾಗರ್ ವಕಾಲತ್ತು ವಹಿಸಿದ್ದಾರೆ.

RELATED ARTICLES
- Advertisment -
Google search engine

Most Popular