Tuesday, April 22, 2025
Google search engine

Homeಸ್ಥಳೀಯದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯ ವೇಳಾ ಪಟ್ಟಿ ಪ್ರಕಟ

ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯ ವೇಳಾ ಪಟ್ಟಿ ಪ್ರಕಟ



ಮೈಸೂರು: ಭಾರತ ಚುನಾವಣಾ ಆಯೋಗವು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಮೇ.09 ರಂದು ಅಧಿಸೂಚನೆಯನ್ನು ಹೊರಡಿಸಲಾಗುತ್ತಿದ್ದು, ಮೇ.16 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಮೇ.17 ರಂದು ನಾಮಪತ್ರಗಳ ಪರಿಶೀಲನೆ, ಮೇ.20 ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ.

ಜೂ.03 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯ ವರೆಗೆ ಮತದಾನದ ನಡೆಯಲಿದ್ದು, ಜೂ.06 ರಂದು ಮತ ಎಣಿಕೆ ನಡೆಯಲಿದೆ.

ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಅರ್ಹ ಮತದಾರರ ನೋಂದಾವಣೆಗೆ ಅರ್ಜಿ ಸಲ್ಲಿಸಲು ಮೇ.06 ಕೊನೆಯ ದಿನಾಂಕವಾಗಿದ್ದು , ಅಗತ್ಯ ದಾಖಲಾತಿಗಳೊಂದಿಗೆ ಅರ್ಹ ಮತದಾರರುಗಳು ಜಿಲ್ಲೆಯ ಎಲ್ಲಾ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ಕಚೇರಿ ಕಾರ್ಯನಿರ್ವಹಣೆಯ ಸಮಯದಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಜಿಲ್ಲಾಧಿಕಾರಿಗಳು, ಮಹಾನಗರಪಾಲಿಕೆಯ ಆಯುಕ್ತರು, ಉಪ ಆಯುಕ್ತರು (ಕಂದಾಯ), ಉಪ ಆಯುಕ್ತರು (ಆಡಳಿತ), ಕೌನ್ಸಿಲ್ ಕಾರ್ಯದರ್ಶಿಗಳು, ಹುಣಸೂರು ಉಪವಿಭಾಗದ ಉಪವಿಭಾಗಾಧಿಕಾರಿಗಳು ಹಾಗೂ ಜಿಲ್ಲೆಯ ಎಲ್ಲಾ ತಾಲ್ಲೂಕು ತಹಶೀಲ್ದಾರರುಗಳನ್ನು ಸಹಾಯಕ ಮತದಾರರ ನೋಂದಣಾಧಿಕಾರಿಗಳಾಗಿ ನೇಮಿಸಲಾಗಿದೆ.

ಮೇ.06 ರಂದು ಕಚೇರಿ ಕಾರ್ಯನಿರ್ವಹಣೆಯ ಅವಧಿಯ ಒಳಗಾಗಿ ಸಂಬಂಧಪಟ್ಟ ಸಹಾಯಕ ಚುನಾವಣಾಧಿಕಾರಿಗಳ ಕಚೇರಿಗಳಿಗೆ ಅರ್ಜಿಗಳನ್ನು ಸಲ್ಲಿಸಿ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಎಲ್ಲಾ ಅರ್ಹ ಮತದಾರರ ನೋಂದಣಿಗೊಳ್ಳಲು ಹಾಗೂ ಮತದಾರರ ಪಟ್ಟಿಯನ್ನು ದೋಷರಹಿತವಾಗಿ ಸಿದ್ಧಪಡಿಸುವ ನಿಟ್ಟಿನಲ್ಲಿ ಸಾರ್ವಜನಿಕರು ಸಹಕರಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಡಾ.ಕೆ.ವಿ ರಾಜೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular