ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಗೆಲ್ಲುವುದು ಖಚಿತವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರಾಕೇಶ್ ಪಾಪಣ್ಣ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯರವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ೫ ಗ್ಯಾರಂಟಿ ಯೋಜನೆಗಳು ಎಂ. ಲಕ್ಷ್ಮಣ್ ಗೆಲುವಿಗೆ ಸಹಕಾರಿಯಾಗಿದೆ. ಮಹಿಳೆಯರು ನುಡಿದಂತೆ ನಡೆದ ಕಾಂಗ್ರೆಸ್ ಪಕ್ಷವನ್ನು ಈ ಬಾರಿ ಬೆಂಬಲಿಸಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿಯೂ ಸಹ ಮಹಿಳೆಯರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿರುವುದರಿಂದ ಹೆಚ್ಚು ಮತಗಳು ಕಾಂಗ್ರೆಸ್ ಪಕ್ಷಕ್ಕೆ ಬರಲಿವೆ ಎಂದ ಅವರು ಎಲ್ಲಾ ೮ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಮತಗಳು ಬಂದಿದ್ದು ಸುಮಾರು ೫೦ ಸಾವಿರ ಮತಗಳ ಅಂತರದಿಂದ ಎಂ. ಲಕ್ಷ್ಮಣ್ ಗೆಲುವು ಸಾಧಿಸಲಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ೨೦ ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳನ್ನು ಕಾಂಗ್ರೆಸ್ ಪಕ್ಷ ಗೆಲ್ಲಲಿದ್ದು ಈ ಬಾರಿ ದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಹಿನಕಲ್ ಹೊನ್ನಪ್ಪ ಶ್ರೀನಿವಾಸ್, ಕೆ.ಜಿ. ನಾಗರಾಜ್, ಪೈ. ಕುಮಾರ್, ದೇವರಾಜ್, ಚಂದ್ರು, ರಮೇಶ್ ಹೊಟ್ಟೇಗೌಡ ಹಾಜರಿದ್ದರು.