ನವದೆಹಲಿ: ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರ, ಅನ್ಯಾಯಕ್ಕೆ ಒಳಗಾದ ಸಂತ್ರಸ್ತರ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ನಿಷ್ಪಕ್ಷಪಾತ ತನಿಖೆ ನಡೆಸಿ ಪ್ರಕರಣದಲ್ಲಿ ಎಷ್ಟೇ ಪ್ರಭಾವಿಗಳು ಷಾಮೀಲಾಗಿದ್ದರೂ ಅವರನ್ನು ಕಾನೂನಿನ ಕೈಗಳಿಗೆ ಒಪ್ಪಿಸಲಾಗುವುದು ಎಂದು ರಾಹುಲ್ ಗಾಂಧಿ ಅವರಿಗೆ ಸಿಎಂ ಸಿದ್ದರಾಮಯ್ಯ ಭರವಸೆ ಕೊಟ್ಟಿದ್ದಾರೆ.
ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರಿಗೆ ರಕ್ಷಣೆ ಕೊಡಬೇಕು. ಈ ಪ್ರಕರಣದದಲ್ಲಿ ಯಾರೇ ಪ್ರಭಾವಿ ಆರೋಪಿಗಳಿದ್ದರು ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ರಾಹುಲ್ ಮನಿವಿಗೆ ಕೂಡಲೇ ಎಕ್ಸ್ ತಾಣದಲ್ಲಿ ಪ್ರತಿಕ್ರಿಯಿಸಿ, ನೊಂದವರ ಕಣ್ಣೀರು ಒರೆಸುವ ಜೊತೆಗೆ ಅವರ ನ್ಯಾಯದ ಹೋರಾಟದಲ್ಲಿ ನಮ್ಮ ಸರ್ಕಾರ ಜೊತೆ ನಿಲ್ಲಲಿದೆ ಎಂಬ ವಾಗ್ದಾನವನ್ನು ರಾಹುಲ್ ಗಾಂಧಿ ಅವರು ಸೇರಿದಂತೆ ನಾಡಿನ ಪ್ರತಿಯೊಬ್ಬರಿಗೂ ನೀಡುತ್ತಿದ್ದೇನೆ. ಸತ್ಯಮೇವ ಜಯತೇ ಎಂದು ಸಿದ್ದರಾಮಯಯ್ಯ ಹೇಳಿದ್ದಾರೆ.