Saturday, April 19, 2025
Google search engine

Homeರಾಜ್ಯಜಮ್ಮು ಕಾಶ್ಮೀರ: ವಾಯುಪಡೆ ವಾಹನಗಳ ಮೇಲೆ ದಾಳಿ

ಜಮ್ಮು ಕಾಶ್ಮೀರ: ವಾಯುಪಡೆ ವಾಹನಗಳ ಮೇಲೆ ದಾಳಿ

ಕಾಶ್ಮೀರ: ಇಲ್ಲಿನ ಪೂಂಚ್‌ನಲ್ಲಿ ವಾಯುಪಡೆ ವಾಹನಗಳ ಬೆಂಗಾವಲು ಪಡೆಯ ಮೇಲೆ ದಾಳಿ ನಡೆದಿದೆ ಎಂದು ವರದಿಯಾಗಿದೆ. ಹಲವು ಯೋಧರು ಗಾಯಗೊಂಡಿರುವ ಶಂಕೆ ವ್ಯಕ್ತವಾಗಿದೆ. ಇದು ಭಯೋತ್ಪಾದನಾ ದಾಳಿ ಎನ್ನಲಾಗಿದೆ. ಸುರನಕೋಟೆಯ ಸನಾಯಿ ಗ್ರಾಮದಲ್ಲಿ ದಾಳಿ ನಡೆದಿದೆ.

ಐವರು ಯೋಧರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆನ್ನಲಾಗಿದೆ. ಒಟ್ಟು ಎರಡು ಸೇನಾ ವಾಹನಗಳ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ವಿವರಗಳನ್ನು ಖಚಿತಪಡಿಸಿಕೊಳ್ಳಲು ಭಾರತೀಯ ಸೇನೆ ಮತ್ತು ಪೊಲೀಸರು ಇನ್ನಷ್ಟು ಪಡೆಗಳನ್ನು ದಾಳಿಯಾದ ಪ್ರದೇಶಕ್ಕೆ ಕಳುಹಿಸಿಕೊಟ್ಟಿದೆ. ಸ್ಥಳೀಯ ರಾಷ್ಟ್ರೀಯ ರೈಫಲ್ಸ್ ಘಟಕವು ಪ್ರದೇಶದಲ್ಲಿ ಸುತ್ತುವರಿದಿದ್ದು, ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ವರದಿಯಾಗಿದೆ.

RELATED ARTICLES
- Advertisment -
Google search engine

Most Popular