ಮಂಡ್ಯ: ಪ್ರಜ್ವಲ್ ರೇವಣ್ಣ ವಿರುದ್ಧ ಮಂಡ್ಯದಲ್ಲಿ ಪ್ರಗತಿಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ.
ಹಾಸನ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಖಂಡಿಸಿ ಜನರು ರೊಚ್ಚಿಗೆದ್ದಿದ್ದು, ಸಂಜಯ್ ವೃತ್ತದಲ್ಲಿ ಪ್ರಗತಿಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಪ್ರಜ್ವಲ್ ರೇವಣ್ಣ ಪ್ರತಿಕೃತಿಗೆ ಚಪ್ಪಲಿಹಾರ ಹಾಕಿ ಚಪ್ಪಲಿಯಲ್ಲಿ ಹೊಡೆದು, ಬಳಿಕ ಪ್ರತಿಕೃತಿ ದಹಿಸಿ ಪ್ರಜ್ವಲ್ ರೇವಣ್ಣ ಆಕ್ರೋಶ ಹೊರಹಾಕಿದ್ದಾರೆ.
ತಕ್ಷಣವೇ ಪ್ರಜ್ವಲ್ ರೇವಣ್ಣ ಬಂಧಿಸುವಂತೆ ಆಗ್ರಹಿಸಿದ್ದಾರೆ.
ಬಿಜೆಪಿ ಜೆಡಿಎಸ್-ಬಿಜೆಪಿ ಪಕ್ಷದ ನಾಯಕರಿಗೆ ವಿಚಾರ ಗೊತ್ತಿದ್ದರು ಟಿಕೆಟ್ ಕೊಟ್ಟು ಚುನಾವಣೆ ನಡೆಸಿದ್ದಾರೆ. ತಕ್ಷಣವೇ ಬಿಜೆಪಿ-ಜೆಡಿಎಸ್ ನಾಯಕರು ಜನರ ಮುಂದೆ ಕ್ಷಮೆಯಾಚನೆ ಮಾಡಬೇಕು. ಯಾವ ದೇಶದಲ್ಲಿ ಪ್ರಜ್ವಲ್ ರೇವಣ್ಣ ಅಡಗಿದರು ಕೂಡಲೇ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.
ಪ್ರತಿಭಟನೆಯಲ್ಲಿ ಮಹಿಳಾ ಮುನ್ನಡೆ ಸಂಘಟನೆಯ ಪೂರ್ಣಿಮಾ, ನಾಗೇಶ್, ಶಿಲ್ಪಾ, ದೊಡ್ಡಯ್ಯ ಸೇರಿ ಹಲವರು ಭಾಗಿಯಾಗಿದ್ದರು.