ಮಂಡ್ಯ: ವಾಹನಗಳ ಮೇಲೆ ಏಕಾಏಕಿ ಮರ ಉರುಳಿ ಬಿದ್ದಿದ್ದು, ಭಾರಿ ಅನಾಹುತ ತಪ್ಪಿದೆ.
ಮಂಡ್ಯದ ಪಾಂಡವಪುರ ತಾಲೂಕಿನ ಡಿಂಕಾ ಗ್ರಾಮದಲ್ಲಿ ಘಟನೆ ನಡೆದಿದ್ದು, ಡಿಂಕಾ ಗ್ರಾಮದ ಶಕ್ತಿ ದೇವತೆ ದರ್ಶನಕ್ಕೆ ಬಂದಿದ್ದ ಭಕ್ತರ ವಾಹನಗಳು ಜಖಂ ಆಗಿವೆ.
ಅದೃಷ್ಟವಶಾತ್ ಜನರು ದೂರು ಓಡಿ ಹೋಗಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆಯಲ್ಲಿ 5ಕ್ಕೂ ಹೆಚ್ಚು ವಾಹನಗಳು ಜಖಂಗೊಂಡಿವೆ.ಶಕ್ತಿ ದೇವತೆಗೆ ಪೂಜೆ ಮಾಡಿಸಲು ತಂದಿದ್ದ ಹೊಸ ಕಾರು ಕೂಡ ಜಖಂ ಆಗಿದೆ.
ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.