ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ, ಭಾರತ್ ರಾಷ್ಟ್ರ ಸಮಿತಿ ಎಂಎಲ್‌ಸಿ ಕಲ್ವಕುಂಟ್ಲ ಕವಿತಾ ಅವರ ಜಾಮೀನು ಅರ್ಜಿಯನ್ನು ಕೋರ್ಟ್ ಮತ್ತೆ ವಜಾಗೊಳಿಸಿದೆ.
ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಬಂಧನಕ್ಕೆ ಒಳಗಾಗಿರುವ ಕವಿತಾ ಅವರು ಸಿಬಿಐ ಮತ್ತು ಇಡಿ ತನಿಖೆಗೆ ಒಳಗಾಗಿದ್ದು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಸಿಬಿಐ ಮತ್ತು ಇಡಿ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರು ಜಾಮೀನು ಅರ್ಜಿ ವಜಾಗೊಳಿಸಿದ್ದು, ಈ ಕೋರ್ಟ್ ಜಾಮೀನು ನೀಡಲಾಗದು ಎಂದು ಹೇಳಿದ್ದಾರೆ.
ಬಂಧನಕ್ಕೆ ಒಳಗಾದ ಬಳಿಕ ಕವಿತಾ ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದು ಉನ್ನತ ನ್ಯಾಯಾಲಯವು ಅರ್ಜಿ ವಜಾಗೊಳಿಸಿತ್ತು. ಅದಾದ ಬಳಿಕ ದೆಹಲಿ ನ್ಯಾಯಾಲಯವು ಮಧ್ಯಂತರ ಜಾಮೀನು ನಿರಾಕರಿಸಿದೆ.