ಮಂಡ್ಯ: ಭಾರಿ ಬಿರುಗಾಳಿ ಸಹಿತ ಮಳೆಗೆ ರಸ್ತೆ ಮಧ್ಯೆ ಮರಗಳು, ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ.
ಮಂಡ್ಯ ನಗರ ಸೇರಿದಂತೆ ಹಲವೆಡೆ ರಾತ್ರಿ ಬಿರುಗಾಳಿ ಸಹಿತ ಮಳೆ ಸುರಿದಿದ್ದು, ಹೆದ್ದಾರಿ ಸೇರಿದಂತೆ ನಗರದ ಹಲವೆಡೆ ಸಂಚಾರ ಅಸ್ತವ್ಯಸ್ತಗೊಂಡಿದೆ.
ಮಂಡ್ಯ ನಗರ ಸೇರಿದಂತೆ ಹಲವೆಡೆ ರಾತ್ರಿ ವಿದ್ಯುತ್ ಸ್ಥಗಿತಗೊಂಡಿತ್ತು.
ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳ ಮೇಲೆ ಮರಗಳು , ವಿದ್ಯುತ್ ಕಂಬಗಳು ಬಿದ್ದ ಪರಿಣಾಮ ಹಲವು ವಾಹನಗಳು ಜಖಂಗೊಂಡಿವೆ.
ಮುರಿದು ಬಿದ್ದ ಮರಗಳು, ವಿದ್ಯುತ್ ಕಂಬಗಳನ್ನ ತೆರವುಗೊಳಿಸಲು ನಗರಸಭೆ ಪೌರಕಾರ್ಮಿಕರು, ಚೆಸ್ಕಾಂ ಸಿಬ್ಬಂದಿಯಿಂದ ರಾತ್ರಿ ಪೂರಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ರಾತ್ರಿ ಎಲ್ಲಾ ವಿದ್ಯುತ್ ಇಲ್ಲದೇ ಸಾರ್ವಜನಿಕರು ಪರದಾಡಿದ್ದಾರೆ.