Tuesday, July 15, 2025
Google search engine

Homeರಾಜ್ಯಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಂತ್ರಸ್ತೆಯರಿಗೆ ನ್ಯಾಯ ಕೊಡಿಸುವುದು ರಾಜ್ಯ ಸರ್ಕಾರಕ್ಕೆ ಬೇಕಿಲ್ಲ: ಕುಮಾರಸ್ವಾಮಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಂತ್ರಸ್ತೆಯರಿಗೆ ನ್ಯಾಯ ಕೊಡಿಸುವುದು ರಾಜ್ಯ ಸರ್ಕಾರಕ್ಕೆ ಬೇಕಿಲ್ಲ: ಕುಮಾರಸ್ವಾಮಿ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಂತ್ರಸ್ತೆಯರಿಗೆ ನ್ಯಾಯ ಕೊಡಿಸುವುದು ರಾಜ್ಯ ಸರ್ಕಾರಕ್ಕೆ ಬೇಕಿಲ್ಲ. ಅವರಿಗೆ ಕೇವಲ ಪ್ರಚಾರ, ಚುನಾವಣೆ ವಿಷಯವನ್ನಾಗಿಸಿ ಗೆಲುವು ಸಾಧಿಸುವುದು ಅಷ್ಟೇ ಬೇಕಿರುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಹೇಳಿದ್ದಾರೆ.

ಜೆಡಿಎಸ್ ಕಚೇರಿಯಲ್ಲಿ ಇಂದು ಮಂಗಳವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಎಸ್ ಐಟಿ ಎಂಬುದು ಈಗ ಸಿದ್ದರಾಮಯ್ಯ ಇನ್ವೆಸ್ಟಿಗೇಷನ್ ಟೀಮ್ ಮತ್ತು ಶಿವಕುಮಾರ್ ಇನ್ವೆಸ್ಟಿಗೇಷನ್ ಟೀಮ್ ಆಗಿದೆ. ನಿಜವಾಗಿ ಸಂತ್ರಸ್ತೆಯರಿಗೆ ನ್ಯಾಯ ಕೊಡಿಸುವ ಉದ್ದೇಶ ಅವರದ್ದಾಗಿದ್ದರೆ ವಿಡಿಯೋ ಹರಿಯಬಿಟ್ಟವರನ್ನು ಯಾಕೆ ಇನ್ನೂ ಬಂಧಿಸಿಲ್ಲ ಆ ವಿಚಾರವಾಗಿ ದೂರು ನೀಡಿದ್ದರೂ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರು. ಪ್ರಜ್ವಲ್ ಪ್ರಕರಣದಲ್ಲಿ ೧೬ ವರ್ಷ ವಯಸ್ಸಿನ ಬಾಲಕಿಯೂ ಸಂತ್ರಸ್ತೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಹಿರಂಗವಾಗಿ ಹೇಳಿದ್ದಾರೆ. ಯಾವ ಆಧಾರದ ಮೇಲೆ ರಾಹುಲ್ ಗಾಂಧಿ ಆ ಹೇಳಿಕೆ ನೀಡಿದರು ಆ ಬಗ್ಗೆ ಎಸ್‌ಐಟಿ ಯಾಕೆ ಇನ್ನೂ ತನಿಖೆ ಮಾಡಿಲ್ಲ ಎಂದು ಪ್ರಶ್ನಿಸಿದ್ದಾರೆ.

RELATED ARTICLES
- Advertisment -
Google search engine

Most Popular