ಮೈಸೂರು: ಶ್ರೀ ಸುತ್ತೂರು ಮಠದಲ್ಲಿಬಸವ ಜಯಂತಿಯನ್ನು ಅಕ್ಷಯತೃತೀಯ ಮೇ ೧೦ ಶುಕ್ರವಾರದಂದು ಬೆಳಗ್ಗೆ ೮.೩೦ಕ್ಕೆ ಪರಮ ಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ ಆಚರಿಸಲಾಗುತ್ತಿದೆ. ಶ್ರೀ ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ, ಪುಷ್ಪಾಂಜಲಿನಂತರ ವಚನಗಾಯನ ಹಾಗೂ ಉಪನ್ಯಾಸ ಕಾರ್ಯಕ್ರಮಗಳಿರುತ್ತವೆ. ಶ್ರೀಮಠದಗುರುಕುಲದ ಸಾಧಕರು ಹಾಗೂ ಸೇವಾ ಸಿಬ್ಬಂದಿಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಭಕ್ತಾದಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಕೋರಿದೆ.