ಬೆಂಗಳೂರು: ಪದವೀಧರರ ಮೂರು ಹಾಗೂ ಶಿಕ್ಷಕರ ಮೂರು ಕ್ಷೇತ್ರಗಳಿಂದ ವಿಧಾನ ಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ಮೇ ೯ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.
ಈಶಾನ್ಯ ಪದವೀಧರ ಕ್ಷೇತ್ರ, ಬೆಂಗಳೂರು ಪದವೀಧರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ, ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರಗಳಲ್ಲಿ ಜೂನ್ ೩ರಂದು ಮತದಾನ ನಡೆಯಲಿದೆ. ಮೇ ೧೬ ನಾಮಪತ್ರ ಸಲ್ಲಿಸಲು ಕೊನೆಯ ದಿನ. ೧೭ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಮೇ ೨೦ರವರೆಗೆ ಅವಕಾಶವಿದೆ. ಜೂನ್ ೬ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ.