Sunday, April 20, 2025
Google search engine

Homeವಿದೇಶಅಮೇರಿಕಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿ ನಾಪತ್ತೆ: ಪೋಷಕರಲ್ಲಿ ಆತಂಕ

ಅಮೇರಿಕಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿ ನಾಪತ್ತೆ: ಪೋಷಕರಲ್ಲಿ ಆತಂಕ

ಚಿಕಾಗೋ: ವಿದ್ಯಾಭ್ಯಾಸಕ್ಕೆಂದು ಚಿಕಾಗೋಗೆ ತೆರಳಿದ್ದ ಭಾರತೀಯ ಮೂಲದ ವಿದ್ಯಾರ್ಥಿಯೋರ್ವ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದ್ದು ಇದೀಗ ಪೋಷಕರು ಆತಂಕಗೊಂಡಿದ್ದಾರೆ

ನಾಪತ್ತೆಯಾಗಿರುವ ವಿದ್ಯಾರ್ಥಿಯನ್ನು ಹೈದರಾಬಾದ್ ಮೂಲದ ರೂಪೇಶ್ ಚಂದ್ರ ಚಿಂತಕಿಂಡಿ(26 ವರ್ಷ) ಎನ್ನಲಾಗಿದ್ದು ಈತ ಕಳೆದ ಮೇ 2 ರಿಂದ ನಾಪತ್ತೆಯಾಗಿದ್ದಾನೆ ಎಂದು ಹೇಳಲಾಗಿದೆ.

ಚಿಕಾಗೋದಲ್ಲಿರುವ ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾ (ಸಿಜಿಐ) ಮತ್ತು ಸ್ಥಳೀಯ ಪೊಲೀಸರು ವಿಸ್ಕಾನ್ಸಿನ್‌ನ ಕಾನ್ಕಾರ್ಡಿಯಾ ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿ ಚಿಂತಕಿಂಡಿಯನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದಾರೆ ಎಂದು ಎಎನ್‌ಐ ವರದಿ ತಿಳಿಸಿದೆ.

ಇತ್ತೀಚಿನ ದಿನಗಳಲ್ಲಿ ಅಮೇರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗಳು ಕಾಣೆಯಾಗುತ್ತಿರುವ ವರದಿಗಳು ಹೆಚ್ಚಾಗುತ್ತಿರುವ ಸಮಯದಲ್ಲೇ ಈ ಪ್ರಕರಣ ಬೆಳಕಿಗೆ ಬಂದಿದೆ.

ಕುಟುಂಬದ ಮೂಲಗಳ ಪ್ರಕಾರ ಮೇ 2 ರಂದು ರೂಪೇಶ್ ತನ್ನ ತಂದೆಯ ಜೊತೆ ಕೊನೆಯದಾಗಿ ಮಾತನಾಡಿದ್ದ ಎಂದು ಹೇಳಲಾಗಿದೆ. ಚಿಕಾಗೋದಲ್ಲಿರುವ ಭಾರತದ ರಾಯಭಾರ ಕಚೇರಿ ಅಧಿಕಾರಿಗಳು ರೂಪೇಶ್ ಅವರನ್ನು ಸಂಪರ್ಕಿಸುವ ಕೆಲಸವನ್ನು ಮಾಡುತ್ತಿದ್ದು ಅಲ್ಲದೆ ಚಿಕಾಗೋ ಪೊಲೀಸರ ಜೊತೆ ನಿರಂತರ ಸಂಪರ್ಕದಲ್ಲಿ ಇರುವುದಾಗಿ ಮಾಹಿತಿ ನೀಡಲಾಗಿದೆ.

RELATED ARTICLES
- Advertisment -
Google search engine

Most Popular