ಧಾರವಾಡ : ನವಲಗುಂದ ಅಣ್ಣಿಗೇರಿ, ಹುಬ್ಬಳ್ಳಿ ಹಾಗೂ ಕುಂದಗೋಳ ತಾಲೂಕಿನಾದ್ಯಂತ ಇರುವ 58 ಕುಡಿಯುವ ನೀರಿನ ಕೆರೆಗಳನ್ನು ಮಲಪ್ರಭಾ ಮತ್ತು ನರಗುಂದ ಶಾಖಾ ಕಾಲುವೆ ಮೂಲಕ ಮೇ 14ರಿಂದ 23ರವರೆಗೆ ತುಂಬಿಸಲಾಗುವುದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಜಿಲ್ಲಾಧಿಕಾರಿ ದಿವ್ಯಾ ಪ್ರಭು ತಿಳಿಸಿದರು.
ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬರದ ನಡುವೆ ಬಿಸಿಲು ಹೆಚ್ಚುತ್ತಿದ್ದು, ಜನ, ಜಾನುವಾರುಗಳಿಗೆ ಕುಡಿಯುವ ನೀರು ತಡೆಯಲು ನಾಲ್ಕು ತಾಲೂಕಿನ 58 ಕೆರೆಗಳಿಗೆ 10 ದಿನಗಳ ಕಾಲ 0.5 ಟಿಎಂಸಿ (600 ಕ್ಯೂಸೆಕ್) ನೀರು ಬಿಡಲಾಗುವುದು. ನವಲಗುಂದ ತಾಲೂಕಿನ 37 ಕೆರೆ, ಅಣ್ಣಿಗೇರಿ 13, ಹುಬ್ಬಳ್ಳಿ 7 ಹಾಗೂ ಕುಂದಗೋಳದ 3 ಪೂರಕ ಸಂಗ್ರಹಣೆ ಕೆರೆಗಳನ್ನು ತುಂಬಿಸಲಾಗುವುದು. ತಾಲೂಕಿನ ಆಯಾಯ ತಹಶೀಲ್ದಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ, ನೀರಾವರಿ ಇಲಾಖೆ ಎಇಗಳ ಮೇಲೆ ತೀವ್ರ ನಿಗಾ ವಹಿಸಲಾಗಿದೆ ಎಂದರು. ಕಾಲುವೆ ನೀರನ್ನು ಕುಡಿಯುವ ನೀರಿಗಾಗಿ ಮಾತ್ರ ಬಳಸಲಾಗುತ್ತದೆ. ಕುಡಿಯುವ ನೀರು ಬಿಟ್ಟು ಬೇರೆ ಯಾವುದೇ ಉದ್ದೇಶಕ್ಕಾಗಿ ತೀವ್ರ ನಿಗಾ ವಹಿಸಲಾಗಿದೆ ಎಂದು ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ್ದಾರೆ.
ಆಯಾ ವ್ಯಾಪ್ತಿಯ ಸಹಾಯಕ ಅಭಿಯಂತರರು, ಪಿಡಿಒ ಗ್ರಾಮ ಲೆಕ್ಕಿಗರು, ಸಿಬ್ಬಂದಿ ತಮ್ಮ ವ್ಯಾಪ್ತಿಯಲ್ಲಿ ಚುರುಕಾಗಿ ಕೆಲಸ ಮಾಡಿ ಕುಡಿಯುವ ನೀರಿಗಿಂತ ಬೇರೆ ಉದ್ದೇಶಕ್ಕೆ ನೀರು ಬಳಕೆಯಾಗದಂತೆ ನೋಡಿಕೊಳ್ಳಬೇಕು. ಹೆಸ್ಕಾಂ ಕಾರ್ಯಪಾಲಕ ಅಭಿಯಂತರ ಕಿರಣಕುಮಾರ ಮಾಹಿತಿ ನೀಡಿ ನೀರು ಬಿಡುವ ಸಂದರ್ಭದಲ್ಲಿ ಎಲ್ಲ ಐಪಿಎಸ್‌ಇಟಿಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸಬಹುದು, ವಿಭಾಗಾಧಿಕಾರಿಗಳನ್ನು ನೇಮಿಸಲಾಗುವುದು. ಸಭೆಯಲ್ಲಿ ಜಿಲ್ಲಾಧಿಕಾರಿ ಗೀತಾ ಸಿ. ಡಿ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ, ಮಲಪ್ರಭಾ ಯೋಜನಾ ವಲಯದ ಅಧೀಕ್ಷಕ ಅಭಿಯಂತರ ಎಸ್.ಬಿ.ಮಲ್ಲಿಗವಾಡ, ಬ್ಯಾಹಟ್ಟಿ ವಿಭಾಗದ ಇಇ ಮನೋಹರ ಬಿಸನಾಳ್, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಇಇಆರ್. ಎಂ.ಸೊಪ್ಪಿಮುತ್ತು ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.