ಮಂಡ್ಯ: ಎಸ್ ಎಸ್ ಎಲ್ ಸಿಯಲ್ಲಿ ರಾಜ್ಯಕ್ಕೆ ತೃತೀಯ, ಮಂಡ್ಯ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತೂಬಿನಕೆರೆಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಕೆ.ಸಿ.ನವನೀತ್ ಗೆ ಮಂಡ್ಯ ಜಿಲ್ಲಾಡಳಿತದಿಂದ ಅಭಿನಂದಿಸಿ, ಪ್ರೋತ್ಸಾಹಿಸಲಾಯಿತು.
ಮಂಡ್ಯ ತಾಲ್ಲೂಕಿನ ಕನ್ನಲಿ ಗ್ರಾಮದ ಚನ್ನೇಗೌಡ, ವೆಂಕಟಲಕ್ಷ್ಮಮ್ಮ ದಂಪತಿ ಪುತ್ರನಾಗಿರುವ ನವನೀತ್ 625ಕ್ಕೆ 623 ಅಂಕ ಪಡೆದಿದ್ದಾನೆ.
ಕಷ್ಟದ ನಡುವೆಯೂ ಮಗನಿಗೆ ಪೋಷಕರು ಬೆಂಬಲವಾಗಿ ನಿಂತಿದ್ದು, ಆರನೇ ತರಗತಿಯಿಂದ ಎಸ್ಸೆಸ್ಸೆಲ್ಸಿವರೆಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದಾನೆ.
ಕನ್ನಡದಲ್ಲಿ 125, ಇಂಗ್ಲೀಷ್, ಹಿಂದಿ, ಗಣಿತದಲ್ಲಿ 100, ಸಮಾಜ ವಿಜ್ಞಾನ ಹಾಗೂ ವಿಜ್ಞಾನದಲ್ಲಿ ತಲಾ 99 ಅಂಕ ಗಳಿಸಿ ಜಿಲ್ಲೆಗೆ ಕೀರ್ತಿ ತಂದಿದ್ದಾನೆ.
ಜಿಲ್ಲಾಡಳಿತದಿಂದ ಅಭಿನಂದಿಸಿ, ಭವಿಷ್ಯ ಉಜ್ವಲವಾಗಿರಲಿ ಎಂದು ಆಶಯ ವ್ಯಕ್ತಪಡಿಸಿದ್ದಾರೆ.
ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ, ಜಿಪಂ ಸಿಇಓ ಶೇಖ್ ತನ್ವೀರ್ ಆಸೀಫ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.