Sunday, April 20, 2025
Google search engine

Homeಅಪರಾಧವೇಶ್ಯಾವಾಟಿಕೆ, ಅಕ್ರಮ ವರ್ಗಾವಣೆ ಆರೋಪಿ: ಸ್ಯಾಂಟ್ರೋ ರವಿಗೆ ಜಾಮೀನು

ವೇಶ್ಯಾವಾಟಿಕೆ, ಅಕ್ರಮ ವರ್ಗಾವಣೆ ಆರೋಪಿ: ಸ್ಯಾಂಟ್ರೋ ರವಿಗೆ ಜಾಮೀನು

ಮೈಸೂರು: ಅತ್ಯಾಚಾರ, ಕೊಲೆ ಬೆದರಿಕೆ ಪ್ರಕರಣದ ಆರೋಪಿ ಕೆ.ಎಸ್.ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿಗೆ ಮೈಸೂರಿನ ಆರನೇ ಹೆಚ್ಚುವರಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

೧೪ ತಿಂಗಳ ಕಾಲ ಜೈಲಿನಲ್ಲಿದ್ದ ಸ್ಯಾಂಟ್ರೋ ರವಿ ಆರೋಗ್ಯ ಸಮಸ್ಯೆ ನಿಮಿತ್ತ ಜಾಮೀನು ನೀಡಬೇಕು ಎಂದು ಮಾಡಿದ್ದ ಮನವಿ ಪುರಸ್ಕರಿಸಿದ ನ್ಯಾಯಾಧೀಶರು, ಜಾಮೀನು ಮಂಜೂರು ಮಾಡಿದ್ದಾರೆ.

ಸ್ಯಾಂಟ್ರೋ ರವಿ ವಿರುದ್ಧ ಕಳೆದ ವರ್ಷ ಮೈಸೂರಿನಲ್ಲಿ ವೇಶ್ಯಾವಾಟಿಕೆ, ಅಕ್ರಮ ವರ್ಗಾವಣೆ, ಅತ್ಯಾಚಾರ ಸೇರಿದಂತೆ ಹಲವು ಆರೋಪಗಳಡಿ ಪ್ರಕರಣ ದಾಖಲಾಗಿತ್ತು. ಆರೋಪಿ ಬಂಧನ ವೇಳೆ ವಶಪಡಿಸಿಕೊಂಡ ಮೊಬೈಲ್ ಹಾಗೂ ಇತರೆ ದಾಖಲೆಗಳು ಆರೋಪಿ ಜತೆಗೆ ಸರ್ಕಾರದ ಮಂತ್ರಿಗಳು, ಶಾಸಕರು ಹಾಗೂ ಉನ್ನತ ಅಧಿಕಾರಿಗಳ ಸಂಪರ್ಕ ಇರುವುದು ಬಹಿರಂಗಗೊಂಡು ಮುಜುಗರ ಎದುರಿಸುವಂತಾಗಿತ್ತು. ಆಗ, ಸ್ಯಾಂಟ್ರೋ ರವಿ ಪ್ರಕರಣದ ತನಿಖಾ ಜವಾಬ್ದಾರಿಯನ್ನು ಸಿಐಡಿಗೆ ವಹಿಸಿ ಅಂದಿನ ಗೃಹ ಸಚಿವ ಆರಗ ಜ್ಞಾನೇಂದ್ರ ಆದೇಶಿಸಿದ್ದರು. ಬಳಿಕ ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ನ್ಯಾಯಾಂಗ ಬಂಧನದಿಂದ ಸಿಐಡಿ ವಶಕ್ಕೆ ನೀಡಿ ಕೋರ್ಟ್ ಆದೇಶಿಸಿತ್ತು. ಪ್ರಕರಣದ ತನಿಖೆ ನಡೆಸುತ್ತಿದ್ದ ಮೈಸೂರಿನ ಪೊಲೀಸರು ದಾಖಲೆಗಳನ್ನು ಸಿಐಡಿ ತಂಡಕ್ಕೆ ವಹಿಸಿದ್ದರು.

ಕಳೆದ ವರ್ಷ ಇತನನ್ನು ಗುಜರಾತ್‌ನಿಂದ ಬಂಧಿಸಿ ಕರೆತರಲಾಗಿತ್ತು. ಈ ಮೊದಲು ಜಾಮೀನಿಗಾಗಿ ಹೈಕೋರ್ಟ್, ಬಳಿಕ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿದ ಅರ್ಜಿಗಳು ತಿರಸ್ಕೃತವಾಗಿದ್ದವು.

RELATED ARTICLES
- Advertisment -
Google search engine

Most Popular