Sunday, April 20, 2025
Google search engine

Homeರಾಜಕೀಯರೇವಣ್ಣ ಪ್ರಕರಣದಲ್ಲಿ ಸಂತ್ರಸ್ತೆಯರಿಗೆ ಹೆಚ್ ಡಿ ಕುಮಾರಸ್ವಾಮಿ ಬೆದರಿಕೆ: ಎಸ್​​ಐಟಿಗೆ ಕಾಂಗ್ರೆಸ್ ದೂರು

ರೇವಣ್ಣ ಪ್ರಕರಣದಲ್ಲಿ ಸಂತ್ರಸ್ತೆಯರಿಗೆ ಹೆಚ್ ಡಿ ಕುಮಾರಸ್ವಾಮಿ ಬೆದರಿಕೆ: ಎಸ್​​ಐಟಿಗೆ ಕಾಂಗ್ರೆಸ್ ದೂರು

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ  ಪ್ರಕರಣದಲ್ಲಿ ಸಂತ್ರಸ್ತರಿಗೆ ಬೆದರಿಕೆ ಹಾಕಿ ತನಿಖೆಯನ್ನು ದಿಕ್ಕು ತಪ್ಪಿಸಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್  ಮುಖಂಡರು ಗುರುವಾರ ವಿಶೇಷ ತನಿಖಾ ತಂಡಕ್ಕೆ ದೂರು ಸಲ್ಲಿಸಿದ್ದಾರೆ.

ಕುಮಾರಸ್ವಾಮಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ. ಮಾಜಿ ಸಚಿವ ಹೆಚ್​​ಡಿ ರೇವಣ್ಣ ಮತ್ತು ಅವರ ಪುತ್ರ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಹಲವು ಮಹಿಳೆಯರು ಸಂತ್ರಸ್ತೆಯರಾಗಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಈ ಪ್ರಕರಣಗಳ ತನಿಖೆಗೆ ಸರ್ಕಾರ ಎಸ್‌ಐಟಿ ರಚಿಸಿದೆ. ಹೀಗಿರುವಾಗ, ಕುಮಾರಸ್ವಾಮಿ ಸಂತ್ರಸ್ತೆಯರ ಸ್ಥಳವನ್ನು ಬಹಿರಂಗಪಡಿಸುತ್ತಿದ್ದಾರೆ ಮತ್ತು ಪ್ರಕರಣದಲ್ಲಿ ಭಾಗಿಯಾಗಿರುವ ಜನರನ್ನು ಪರೋಕ್ಷವಾಗಿ ರಕ್ಷಿಸುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಕಾರಣಕ್ಕಾಗಿಯೇ ಸಂತ್ರಸ್ತೆಯರು ದೂರು ನೀಡಲು ಮುಂದೆ ಬರುತ್ತಿಲ್ಲ ಎಂದು ಆರೋಪಿಸಲಾಗಿದೆ.

ಈ ಪ್ರಕರಣದ ಕುರಿತು ಹೆಚ್ಚಿನ ವಿವರಗಳು ಕುಮಾರಸ್ವಾಮಿಯವರ ಬಳಿ ಇವೆ ಎಂದಿರುವ ಕಾಂಗ್ರೆಸ್ ನಾಯಕರು, ಅವರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಎಸ್​​ಐಟಿಯನ್ನು ಒತ್ತಾಯಿಸಿದ್ದಾರೆ.

ಬಿಜೆಪಿ ಮುಖಂಡ ದೇವರಾಜೇಗೌಡ ಅವರು ತಮ್ಮ ಪಕ್ಷದ ನಾಯಕರಿಗೆ ವಿವರಗಳನ್ನು ರವಾನಿಸಿದ್ದಾರೆ. ಆದರೆ, ಅವರು ಪೊಲೀಸರನ್ನು ಏಕೆ ಸಂಪರ್ಕಿಸಲಿಲ್ಲ? ಗೌಡ ಅವರು ವಕೀಲರಾಗಿದ್ದು, ಅವರು ಕರ್ನಾಟಕ ಮಹಿಳಾ ಆಯೋಗವನ್ನೂ ಸಂಪರ್ಕಿಸಬಹುದಿತ್ತು ಎಂದು ಕಾಂಗ್ರೆಸ್ ನಾಯಕರು ದೂರಿನಲ್ಲಿ ಹೇಳಿದ್ದಾರೆ.

ವೀಡಿಯೋಗಳನ್ನು ಹರಿಬಿಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕುಮಾರಸ್ವಾಮಿ ಮತ್ತು ದೇವರಾಜೇಗೌಡ ಒತ್ತಾಯಿಸುತ್ತಿರುವುದನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ನಾಯಕರು, ನಿಜವಾಗಿ ಶಾಮೀಲಾಗಿರುವವರ ವಿರುದ್ಧ ಅವರ ಹೋರಾಟ ಅಲ್ಲ. ಇಬ್ಬರೂ ಸಂತ್ರಸ್ತ ಮಹಿಳೆಯರಿಗಾಗಿ ಧ್ವನಿ ಎತ್ತುತ್ತಿಲ್ಲ, ಆದರೆ ಪೆನ್ ಡ್ರೈವ್ ಅನ್ನು ಪ್ರಸಾರ ಮಾಡುವವರತ್ತ ಗಮನ ಹರಿಸುವ ಮೂಲಕ ತನಿಖೆಯನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದಿದ್ದಾರೆ.

RELATED ARTICLES
- Advertisment -
Google search engine

Most Popular