ಮದ್ದೂರು ಪಟ್ಟಣದ ಶಿವಪುರದ ಪೂರ್ಣಪ್ರಜ್ಞ ಶಾಲೆಯಲ್ಲಿ 2023 -24 ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ವಿದ್ಯಾರ್ಥಿ ಗಗನ್ ಎಸ್ ಗೌಡ ಹಾಗೂ ವಿದ್ಯಾರ್ಥಿನಿ ಖುಷಿ ಎಸ್ ವಿದ್ಯಾರ್ಥಿಗಳು 625 ಅಂಕಕ್ಕೆ 619 ಅಂಕಗಳನ್ನು ಪಡೆದು ಜಿಲ್ಲೆಗೆ ತೃತೀಯ ಸ್ಥಾನ ತಾಲೂಕಿಗೆ ಪ್ರಥಮ ಸ್ಥಾನವನ್ನ ಪಡೆದುಕೊಂಡಿದ್ದಾರೆ.
ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಇಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿಎಚ್ ಕಾಳಿರಯ್ಯ ವಿದ್ಯಾರ್ಥಿಗಳನ್ನು ಅಭಿನಂದಿಸಿ ಸಿಹಿ ತಿನಿಸಿ ಅಭಿನಂದನೆ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಅವರು ಪೂರ್ಣಪ್ರಜ್ಞಶಾಲೆ ಕಳೆದ ಹತ್ತು-ಹನ್ನೆರಡು ವರ್ಷಗಳಿಂದಲೂ ಕೂಡ ಉತ್ತಮವಾದ ಫಲಿತಾಂಶವನ್ನು ಕಂಡುಕೊಳ್ಳುವ ಮೂಲಕ ರಾಜ್ಯ ಜಿಲ್ಲಾ ಮಟ್ಟದಲ್ಲಿ ಹೆಸರು ಮಾಡಿದೆ ಸಂಸ್ಥೆಯ ಅಧ್ಯಕ್ಷರಾದ ಕಸ್ತೂರಿ ಹಾಗೂ ಮುಖ್ಯ ಶಿಕ್ಷಕರಾದ ಅನಂತಗೌಡರ ಪರಿಶ್ರಮ ಅಲ್ಲಿಯ ಶಿಕ್ಷಕರ ಒಗ್ಗಟ್ಟು ಸಂಸ್ಥೆಯನ್ನು ಹಾಗೂ ವಿದ್ಯಾರ್ಥಿಗಳನ್ನು ಪ್ರೇರೇಪಿಸಲು ಸಾಧ್ಯವಾಗಿದೆ ಎಂದು ಪ್ರಸಂಶೆ ವ್ಯಕ್ತಪಡಿಸಿದರು.
ಈ ವೇಳೆ ಪೂರ್ಣಪ್ರಜ್ಞಶಾಲೆಯ ಮುಖ್ಯ ಶಿಕ್ಷಕ ಅನಂತಗೌಡ, ಇಸಿಓ ಮಹೇಶ್ ಸೇರಿದಂತೆ ಇತರರು ಹಾಜರಿದ್ದರು.