Sunday, April 20, 2025
Google search engine

Homeಸ್ಥಳೀಯಬಸವ ಜಯಂತಿ ಹಾಗೂ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

ಬಸವ ಜಯಂತಿ ಹಾಗೂ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

ಮೈಸೂರು:  ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವ ಜಯಂತಿ ಹಾಗೂ ಶ್ರೀ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಅಂಗವಾಗಿ  ಜಿಲ್ಲಾಡಳಿತದ ವತಿಯಿಂದ ವಿಶ್ವಗುರು ಸಾಂಸ್ಕೃತಿಕ ನಾಯಕ ಬಸವಣ್ಣನವರು ಹಾಗೂ ಶ್ರೀ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಗನ್ ಹೌಸ್ ವೃತ್ತದ ಬಳಿ ಬಸವೇಶ್ವರ ಪುತ್ಥಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ  ಜಯಂತಿಯನ್ನು  ಸರಳವಾಗಿ ಆಚರಣೆ ಮಾಡಲಾಯಿತು.

 ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಆಯುಕ್ತರಾದ ರಮೇಶ್ .ಬಿ ಮತ್ತು ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ.ಗಾಯಿತ್ರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಡಾ ಸುದರ್ಶನ್  ಹಾಗೂ ಇತರ ಗಣ್ಯರು ಸೇರಿ, ಬಸವಣ್ಣನವರು ಹಾಗೂ ಹೇಮರಡ್ಡಿ ಮಲ್ಲಮ್ಮ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.

RELATED ARTICLES
- Advertisment -
Google search engine

Most Popular