ವರದಿ : ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ : ಸಾಲಿಗ್ರಾಮ ತಾಲ್ಲೂಕಿನ ಕಾಳಮ್ಮನಕೊಪ್ಪಲು ಗ್ರಾಮದ ಗ್ರಾಮದೇವತೆ ಶ್ರೀ ಕಾಳಮ್ಮ ತಾಯಿ ದೇವರ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವವು ನೂರಾರು ಭಕ್ತರ ನಡುವೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಅತ್ಯಂತ ವಿಜೃಂಭಣೆಯಿಂದ ನಡೆಯಿತು.
ದೇವಾಲಯದಲ್ಲಿ ದೇವರಿಗೆ ವಿವಿಧ ಅಭಿಷೇಕಗಳು, ಆರತಿಗಳನ್ನು ಮಾಡಿ ವಿಶೇಷ ಪೂಜೆಯನ್ನು ಸಲ್ಲಿಸಿ ಮಹಾ ಮಂಗಳಾರತಿ ಮಾಡಿ ನಂತರ ಸಾರ್ವಜನಿಕರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.
ರಥೋತ್ಸವದಲ್ಲಿ ಭಾಗವಹಿಸಿದ್ದ ಭಕ್ತರುಗಳು ರಥಕ್ಕೆ ಹಣ್ಣು ಜವನಗಳನ್ನು ಎಸೆದು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು.
ಶ್ರೀ ಕಾಳಿಕಾಂಭ ರಥೋತ್ಸವಕ್ಕೆ ಮೊದಲು ದೇವರ ಮೂರ್ತಿಯನ್ನು ಅಡ್ಡ ಪಲ್ಲಕ್ಕಿಯಲ್ಲಿ ಪ್ರತಿಷ್ಟಾಪಿಸಿ ಹೆಣ್ಣುಮಕ್ಕಳು ಪೂರ್ಣ ಕುಂಭ ಕಳಸ ಹೊತ್ತು ವಿವಿಧ ಕಲಾ ತಂಡಗಳು ಹಾಗೂ ಮಂಗಳ ವಾದ್ಯಗಳೊಂದಿಗೆ ಗ್ರಾಮದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ಮಾಡಲಾಯಿತು.
ರಥೋತ್ಸವದಲ್ಲಿ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.
ಜಾತ್ರೆಯಲ್ಲಿ ಸಿಹಿತಿಂಡಿ, ಬಳೆ, ತಂಪು ಪಾನೀಯ, ಆಟಿಕೆ ಸಾಮಾನು, ಮನೆ ಬಳಕೆಯ ವಸ್ತುಗಳು ಸೇರಿದಂತೆ ಹಲವು ಮಾದರಿಯ ಅಂಗಡಿಗಳು ತಲೆ ಎತ್ತಿದ್ದವು.
ಸಾಲಿಗ್ರಾಮ ಪೊಲೀಸ್ ಠಾಣೆಯ ಸಿಬ್ಬಂದಿಗಳು ಮುಂಜಾಗೃತ ಕ್ರಮವಾಗಿ ಬಂದು ಬಸ್ತ್ ಮಾಡಿದ್ದರು.
ರಥೋತ್ಸವದಲ್ಲಿ ಶಾಸಕ ಡಿ.ರವಿಶಂಕರ್, ಜನಪ್ರತಿನಿದಿನಗಳು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಯಜಮಾನರುಗಳು, ಮಹಿಳೆಯರು, ಯುವಕರು, ಮಕ್ಕಳು ಸೇರಿದಂತೆ ಹಲವರು ಪಾಲ್ಗೊಂಡಿದ್ದರು.