ಮಂಗಳೂರು(ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಕುಡಿಯುವ ನೀರನ್ನು ಸಮರ್ಪಕವಾಗಿ ಪೂರೈಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ.
ಎ. ಎಂ. ಆರ್ ಕಿಂಡಿ ಅಣೆಕಟ್ಟಿನ ನೀರಿನ ಮಟ್ಟವು 15. 28 ಮೀ. ನಷ್ಟು ಇದೆ. ಜಿಲ್ಲೆಯ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳಲ್ಲಿ ಒಂದಾದ ಕುಡಿಯುವ ನೀರನ್ನು ಸಮರ್ಪಕವಾಗಿ ಪೂರೈಸುವ ಸಾರ್ವಜನಿಕ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಬಿಳಿಯೂರು ಅಣೆಕಟ್ಟಲ್ಲಿ ಲಭ್ಯವಿರುವ ನೀರನ್ನು ಕಿಂಡಿ ಅಣೆಕಟ್ಟಿಗೆ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಯವರ ಪ್ರಕಟಣೆ ತಿಳಿಸಿದೆ.