Monday, April 21, 2025
Google search engine

Homeರಾಜ್ಯವಾರಾಣಸಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ

ವಾರಾಣಸಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ

ವಾರಾಣಸಿ: ಪ್ರಧಾನಿ ನರೇಂದ್ರ ಮೋದಿ ೨೦೨೪ರ ಲೋಕಸಭಾ ಚುನಾವಣೆಗೆ ಉತ್ತರ ಪ್ರದೇಶದ ವಾರಾಣಸಿ ಯಿಂದ ನಾಮಪತ್ರ ಸಲ್ಲಿಸಿದ್ದಾರೆ. ಇಂದು ಬೆಳಗ್ಗೆ ಕಾಲಭೈರವನ ದರ್ಶನ ಪಡೆದು ಬಳಿಕ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ೨೦೧೪ ಮತ್ತು ೨೦೧೯ರಲ್ಲಿ ಪ್ರಧಾನಿ ಮೋದಿ ಇಲ್ಲಿಂದ ಗೆದ್ದಿದ್ದಾರೆ. ಇದಕ್ಕೂ ಮುನ್ನ ಮೇ ೧೩ರಂದು ಆ ಪ್ರದೇಶದಲ್ಲಿ ರೋಡ್ ಶೋ ನಡೆಸಿದ್ದರು. ನಟಿ-ರಾಜಕಾರಣಿ ಕಂಗನಾ ರಣಾವತ್ ಕೂಡ ಉತ್ತರಾಖಂಡದ ಮಂಡಿಯಿಂದ ನಾಮಪತ್ರ ಸಲ್ಲಿಸಲಿದ್ದಾರೆ. ಇದು ಅವರ ಮೊದಲ ರಾಜಕೀಯ ಇನ್ನಿಂಗ್ಸ್ ಎಂದೇ ಹೇಳಬಹುದು.

೨೦೧೪ರ ಲೋಕಸಭೆ ಚುನಾವಣೆಯಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿ ಮೊಟ್ಟಮೊದಲ ಬಾರಿಗೆ ನರೇಂದ್ರ ಮೋದಿ ನಾಮಪತ್ರ ಸಲ್ಲಿಸಲು ಬಂದಿದ್ದರು. ಬಿಜೆಪಿ ಭಾರಿ ಬಹುಮತ ಪಡೆದ ನಂತರ ದೇಶದ ಪ್ರಧಾನಿಯಾದರು. ೨೦೧೯ರಲ್ಲಿಯೂ ಪ್ರಧಾನಿ ನರೇಂದ್ರ ಮೋದಿ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ತಮ್ಮ ಉಮೇದುವಾರಿಕೆಯನ್ನು ಮಂಡಿಸಿ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾದರು. ನಾಮಪತ್ರ ಸಲ್ಲಿಸುವ ಮುನ್ನ ಪ್ರಧಾನಿ ಮೋದಿ ಸೋಮವಾರ ಸುಮಾರು ೪ ಗಂಟೆಗಳ ರೋಡ್ ಶೋ ನಡೆಸಿದರು. ಶ್ರೀ ಕಾಶಿ ವಿಶ್ವನಾಥ ದೇವಸ್ಥಾನ ತಲುಪಿ ಪ್ರಾರ್ಥನೆ ಸಲ್ಲಿಸಿದರು.

ಬಿಜೆಪಿಯ ಹಿರಿಯ ನಾಯಕರಾದ ರಾಜನಾಥ್ ಸಿಂಗ್, ಅಮಿತ್ ಶಾ, ಜೆಪಿ ನಡ್ಡಾ ಅವರಲ್ಲದೆ, ಎನ್‌ಡಿಎ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಮತ್ತು ನಿತೀಶ್ ಕುಮಾರ್ ಅವರು ಪ್ರಧಾನಿ ಮೋದಿಯವರ ನಾಮಪತ್ರದಲ್ಲಿ ಸಲ್ಲಿಕೆ ವೇಳೆ ಉಪಸ್ಥಿತರಿದ್ದರು. ಇದಲ್ಲದೇ ಎನ್‌ಡಿಎಯ ಘಟಕ ಪಕ್ಷಗಳ ನಾಯಕರೂ ಪಾಲ್ಗೊಂಡಿದ್ದರು. ಚಿರಾಗ್ ಪಾಸ್ವಾನ್, ಓಂ ಪ್ರಕಾಶ್ ರಾಜ್‌ಭರ್, ಸಂಜಯ್ ನಿಶಾದ್, ಅನುಪ್ರಿಯಾ ಪಟೇಲ್ ಕೂಡ ನಾಮಪತ್ರ ಸಲ್ಲಿಸಲಿದ್ದಾರೆ.

RELATED ARTICLES
- Advertisment -
Google search engine

Most Popular