ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಕುಮಾರಿ ಅಂಕಿತಾ ಹಾಗೂ ತೃತೀಯ ಸ್ಥಾನ ಗಳಿಸಿದ ಮಂಡ್ಯದ ತುಂಬಕೆರೆ ವಿದ್ಯಾರ್ಥಿ ನವನೀತ್ ಅವರನ್ನು ಸಮಾಜ ಕಲ್ಯಾಣ ಸಚಿವ ಡಾ. ಹೆಚ್ ಸಿ ಮಹದೇವಪ್ಪ ಸನ್ಮಾನಿಸಿದರು.
ಬಾಗಲಕೋಟೆಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಕುಮಾರಿ ಅಂಕಿತಾ ೬೨೫ಕ್ಕೆ ೬೨೫ ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಹಾಗೆಯೇ ಮಂಡ್ಯದ ತುಂಬಕೆರೆ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ನವನೀತ್ ತೃತೀಯ ಸ್ಥಾನ ಗಳಿಸಿದ್ದಾರೆ. ಈ ವಿದ್ಯಾರ್ಥಿಗಳನ್ನು ಬೆಂಗಳೂರಿನಲ್ಲಿರುವ ಸಚಿವರ ಸರ್ಕಾರಿ ನಿವಾಸದಲ್ಲಿ ಇಂದು ಮಂಗಳವಾರ ಹೆಚ್ ಸಿ ಮಹದೇವಪ್ಪ ಸನ್ಮಾನಿಸಿದರು.