ಸಾಲಿಗ್ರಾಮ: ತಾಲ್ಲೂಕಿನ ಹರದನಹಳ್ಳಿ ಗ್ರಾಮದಲ್ಲಿ ಶ್ರೀ ಭಗೀರಥ ಉಪ್ಪಾರ ಸಂಘದ ವತಿಯಿಂದ ಮಹರ್ಷಿ ಶ್ರೀ ಭಗೀರಥ ಜಯಂತಿಯನ್ನು ಸಡಗರ ಸಂಭ್ರಮದಿಂದ ಆಚರಣೆ ಮಾಡಲಾಯಿತು.
ಶ್ರೀ ಭಗೀರಥ ಮಹರ್ಷಿ ಅವರ ಭಾವಚಿತ್ರಕ್ಕೆ ಹೂವಿನ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಿ ಪುಷ್ಪರ್ಚಾನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿ ಸಾರ್ವಜನಿಕರುಗಳಿಗೆ ಸಿಹಿ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಶ್ರೀ ಭಗೀರಥ ಉಪ್ಪಾರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಜನಪ್ರತಿನಿಧಿಗಳು, ವಿವಿಧ ದೇವರ ಕುಲದ ಯಜಮಾನರುಗಳು, ಮುಖಂಡರು, ಯುವಕರು, ನೌಕರರು ಸೇರಿದಂತೆ ಹಲವರು ಭಾಗವಹಿಸಿದ್ದರು.