Tuesday, April 22, 2025
Google search engine

Homeರಾಜ್ಯಸುದ್ದಿಜಾಲಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ...

ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶ

ಬಳ್ಳಾರಿ: ನಗರದ ಕೋಟೆ ಪ್ರದೇಶದ ಸೇಂಟ್ ಜಾನ್ಸ್ ಪ್ರೌಢ ಶಾಲೆ ಪರೀಕ್ಷಾ ಕೇಂದ್ರದಲ್ಲಿ ಮೇ 20 ರಿಂದ 29 ರ ವರೆಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ಕರ್ನಾಟಕ ಮುಕ್ತ ಶಾಲೆ-ಕೆಓಎಸ್ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯ ಆವರಣವನ್ನು ಸಿಆರ್‍ಪಿಸಿ ಕಲಂ 144 ಮೇರೆಗೆ ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.

ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತ ಬೆಳಿಗ್ಗೆ 09 ಗಂಟೆಯಿಂದ ಮಧ್ಯಾಹ್ನ 1.30 ರವರೆಗೆ ಜೆರಾಕ್ಸ್ ಸೆಂಟರ್ ಮತ್ತು ಇಂಟರ್‍ನೆಟ್ ಸೆಂಟರ್‍ಗಳನ್ನು ಕಾರ್ಯನಿರ್ವಹಿಸದಂತೆ ಆದೇಶಿಸಿದ್ದು, ಸದರಿ ಪ್ರದೇಶದಲ್ಲಿ ಅನಧೀಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದೆ. ಈ ಆದೇಶವು ಪರೀಕ್ಷಾ ಕಾರ್ಯ ನಿರ್ವಹಿಸುವ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular