Sunday, April 20, 2025
Google search engine

Homeರಾಜ್ಯಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಜನ್ಮದಿನ: ಶುಭಾಶಯ ಕೋರಿದ ಪ್ರಧಾನಿ ಮೋದಿ

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಜನ್ಮದಿನ: ಶುಭಾಶಯ ಕೋರಿದ ಪ್ರಧಾನಿ ಮೋದಿ

ನವದೆಹಲಿ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಇಂದು ತಮ್ಮ 91ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

ಎಕ್ಸ್‌ನಲ್ಲಿ ಶುಭಾಶಯ ತಿಳಿಸಿರುವ ಪ್ರಧಾನಿ ಮೋದಿ, ಕೃಷಿ ಕ್ಷೇತ್ರದ ಪ್ರಗತಿಯಲ್ಲಿ ಅವರ ಕೊಡುಗೆಯನ್ನು ಶ್ಲಾಘಿಸಿದ್ದಾರೆ.

ಎಚ್‌.ಡಿ.ದೇವೇಗೌಡ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ರಾಷ್ಟ್ರಕ್ಕೆ ನೀಡಿದ ಕೊಡುಗೆಗಾಗಿ ರಾಜಕೀಯ ವಲಯದಲ್ಲಿ ಅವರು ಸಾಕಷ್ಟು ಗೌರವಕ್ಕೆ ಪಾತ್ರರಾಗಿದ್ದಾರೆ. ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಯಲ್ಲಿ ಅವರ ಒಲವು ಗಮನಾರ್ಹವಾಗಿದೆ. ಅವರಿಗೆ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಹೇಳಿದರು.

ಜೆಡಿಎಸ್‌ ನ ರಾಷ್ಟ್ರೀಯ ಅಧ್ಯಕ್ಷರಾಗಿರುವ ದೇವೇಗೌಡ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎದೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ.

RELATED ARTICLES
- Advertisment -
Google search engine

Most Popular