Tuesday, April 22, 2025
Google search engine

Homeಅಪರಾಧನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿದ ಕೆಎಸ್‌ಆರ್‌ಟಿಸಿ ಬಸ್: ೬ ಮಂದಿಗೆ ಗಾಯ

ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿದ ಕೆಎಸ್‌ಆರ್‌ಟಿಸಿ ಬಸ್: ೬ ಮಂದಿಗೆ ಗಾಯ

ನೆಲಮಂಗಲ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಡಿವೈಡರ್ ಮೇಲೆ ಹತ್ತಿದ ಘಟನೆ ನೆಲಮಂಗಲ ಬಳಿ ನಡೆದಿದೆ.

ನೆಲಮಂಗಲದ ಅಡಕಮಾರನಹಳ್ಳಿ ಬಳಿಯ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು, ೬ ಮಂದಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತಕ್ಕೀಡಾದ ಬಸ್ ಸೋಮವಾರಪೇಟೆಯಿಂದ ಬೆಂಗಳೂರಿಗೆ ಬರುತ್ತಿತ್ತು. ನೆಲಮಂಗಲ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಫ್ಲೈಓವರ್ ರಸ್ತೆಯಲ್ಲಿ ಬರುತ್ತಿದ್ದಾಗ ಚಾಲಕ ಓವರ್ ಟೇಕ್ ಮಾಡಲು ಮುಂದಾಗಿದ್ದಾನೆ. ಈ ವೇಳೆ ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಿದೆ.

RELATED ARTICLES
- Advertisment -
Google search engine

Most Popular